ನಾಳೆ ಕಾಂಗ್ರೆಸ್‌ನ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: DK ಶಿವಕುಮಾರ

ನಾಳೆ ಕಾಂಗ್ರೆಸ್‌ನ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: DK ಶಿವಕುಮಾರ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ತೆರಳಿ ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಬಂದು ಹೋದ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಈ ಹಿಂದೆಯೇ ಹೇಳಲಾಗಿತ್ತು. ಅದರಂತೆ ಯುಗಾದಿ ಹಬ್ಬವಾದ ನಾಳೆ ಕಾಂಗ್ರೆಸ್‌ನ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.

ಸಿದ್ದರಾಮಯ್ಯ ಅವರು ಕೋಲಾರ, ವರುಣ, ಬಾದಾಮಿ, ಚಾಮುಂಡೇಶ್ವರಿ ಸೇರಿದಂತೆ ಯಾವ ಕ್ಷೇತ್ರವನ್ನು ಬೇಕಾದರೂ ಆಯ್ಕೆ ಮಾಡಿಕೊಳ್ಳಲಿ. ಅವರಿಗೆ ಇಷ್ಟವಾದ ಕ್ಷೇತ್ರದಲ್ಲಿ ಸ್ಪರ್ಧಿಸುವುದುಕ್ಕೆ ಅವರಿಗೆ ಅವಕಾಶವಿದೆ ಎಂದು ‌ಪ್ರಶ್ನೆಯೊಂದಕ್ಕೆ ಈ ವೇಳೆ ಪ್ರತಿಕ್ರಿಯಿಸಿದರು.

Previous Post Next Post

Contact Form

f="https://unpkg.com/video.js/dist/video-js.css" rel="stylesheet">