ಮೀಸಲಾತಿ ವಿಳಂಬ ವಿರೋಧಿಸಿ ಕಾಂಗ್ರೆಸ್ ಪ್ರೊಟೆಸ್ಟ್: ಡಿಕೆಶಿ, ಸಿದ್ದರಾಮಯ್ಯ ಪೊಲೀಸರ ವಶಕ್ಕೆ
ಆಡಳಿತ ಬಿಜೆಪಿ ಸರ್ಕಾರದ ವಿರುದ್ಧ ವಿರೋಧ ಪಕ್ಷ ಪ್ರತಿಭಟನೆಗಿಳಿದಿದೆ. ಸರ್ಕಾರದ ವಿರುದ್ಧ ಎಸ್‌ಸಿ/ಎಸ್‌ಟಿ ಮೀಸಲಾತಿ ವಿಳಂಬ ಅಸ್ತ್ರ ಪ್ರಯೋಗಿಸಿದ್ದು, ರಾಜಭವನ ಚಲೋ ಕೈಗೊಂಡಿದ್ದ ಕಾಂಗ್ರೆಸ್ ನಾಯಕರೀಗ ಪೊಲೀಸರ ವಶದಲ್ಲಿದ್ದಾರೆ.
ರಾಜಭವನ ತಲುಪದಂತೆ ಮಾರ್ಗಮಧ್ಯೆಯೇ ಪೊಲೀಸರು ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದಿದ್ದಾರೆ. ಇವರೊಟ್ಟಿಗೆ ಬಿ.ಕೆ. ಹರಿಪ್ರಸಾದ್, ಮಾಜಿ ಡಿಸಿಎಂ ಪರಮೇಶ್ವರ, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಎಸ್‌ಸಿ/ ಎಸ್‌ಟಿ ಮೀಸಲಾತಿಯನ್ನು ಶೆಡ್ಯೂಲ್ 9ಕ್ಕೆ ಸೇರಿಸುವಂತೆ ಪಟ್ಟು ಹಿಡಿದಿದ್ದು, ಐದು ತಿಂಗಳಿಂದ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು.
Tags
ರಾಜಕೀಯ