ಕಾಲ್ತುಳಿತಕ್ಕೆ ಸಿಲುಕಿ ಶಿಶು ಮೃತ್ಯು : ಆರು ಮಂದಿ ಪೊಲೀಸರ ವಿರುದ್ಧ ಎಫ್ಐಆರ್‌ ದಾಖಲು...!!FIR

ಕಾಲ್ತುಳಿತಕ್ಕೆ ಸಿಲುಕಿ ಶಿಶು ಮೃತ್ಯು : ಆರು ಮಂದಿ ಪೊಲೀಸರ ವಿರುದ್ಧ ಎಫ್ಐಆರ್‌ ದಾಖಲು...!!

ರಾಂಚಿ: ಜಾರ್ಖಂಡ್‌ನ‌ ಗಿರಿಧಿ ಜಿಲ್ಲೆಯಲ್ಲಿ ಆರೋಪಿಗಳ ಬಂಧನದ ವೇಳೆ ಪೊಲೀಸರು ನಡೆಸಿದ ಕಾರ್ಯಾಚರಣೆ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಶಿಶುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ.
ಈ ಸಂಬಂಧ ಆರು ಮಂದಿ ಪೊಲೀಸರ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಈ ಪೈಕಿ ಐದು ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಈ ಅಂಶ ಮರಣೋತ್ತರ ಪರೀಕ್ಷೆಯಲ್ಲಿ ಕೂಡ ದೃಢವಾಗಿದೆ.
ಮೃತ ಮಗುವಿನ ಅಜ್ಜ ಭೂಷಣ್‌ ಪಾಂಡೆ, ಮತ್ತೂಬ್ಬನ ವಿರುದ್ಧ ಜಾಮೀನು ರಹಿತ ವಾರೆಂಟ್‌ ಜಾರಿ ಕಾರಣ ಪೊಲೀಸರು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದರು ಎನ್ನಲಾಗಿದೆ.
ಪೊಲೀಸ್ ಉನ್ನತ ಅಧಿಕಾರಿಗಳು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.
Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">