ಕಲಬುರಗಿ ಜಿಲ್ಲೆಯ ಸೇಡಂ ವಿಧಾನಸಭೆ ಕ್ಷೇತ್ರದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕರು ಮತ್ತು ಮಾಜಿ ಸಚಿವರಾದ ಶ್ರೀ ಗಾಲಿ ಜನಾರ್ಧನ ರೆಡ್ಡಿಯವರು ಸೇಡಂ ವಿಧಾನಸಭೆ ಕ್ಷೇತ್ರದ ಅಧಿಕೃತ ಅಭ್ಯರ್ಥಿಯಾಗಿ ಗಾಲಿ ಜನಾರ್ಧನ ರೆಡ್ಡಿಯವರ ಸಂಬಂಧಿ ಜಿ ಲಲ್ಲೇಶ್ ರೆಡ್ಡಿಯವರನ್ನು ಘೊಷಣೆ ಮಾಡುವ ಮೂಲಕ ಶಕ್ತಿ ತುಂಬಿದರು.
ನಿಡಗುಂದ ಗ್ರಾಮದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಕ್ಷೇತ್ರದ ಅಭ್ಯರ್ಥಿ ಜಿ ಲಲ್ಲೇಶ್ ರೆಡ್ಡಿ ನೇತೃತ್ವದಲ್ಲಿ ಸೇಡಂ ವಿಧಾನಸಭೆ ಕ್ಷೇತ್ರದ ಸುಳೇಪೇಟೆ ಮತ್ತು ನಿಡಗುಂದ ಗ್ರಾಮಗಳಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಛೇರಿ ಉದ್ಘಾಟಿಸಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ 20 ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆ ಯಲ್ಲಿ ಪಾಲ್ಗೊಂಡು ಸೇಡಂ ನಗರದ ವೀರಶೈವ ಕಲ್ಯಾಣ ಮಂಟಪದಿಂದ ಕೊತ್ತಲ ಬಸವೇಶ್ವರ ದೇವಸ್ಥಾನದ ವರೆಗೆ ಬೃಹತ್ ಬೈಕ್ ಮತ್ತು ಕಾರು ರ್ಯಾಲಿ ಮೂಲಕ ಜನಾರ್ಧನ ರೆಡ್ಡಿಯವರನ್ನು ಸ್ವಾಗತಿಸುವ ಮೂಲಕ ವೇದಿಕೆಗೆ ಬರಮಾಡಿಕೊಂಡರು.
ನಂತರ ವೇದಿಕೆರ ನಾಡಗೀತೆ ಯೊಂದಿಗೆ ಜ್ಯೋತಿ ಬೆಳಗಿಸುವ ಮೂಲಕ ಸಮಾವೇಶ ಉದ್ಘಾಟನೆ ಮಾಡಿದರು. ಜಿ ನಲ್ಲೇಶ್ ರೆಡ್ಡಿ ಯವರನ್ನು ಸೇಡಂ ವಿಧಾನ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ವೆಂಕಟರೆಡ್ಡಿ, ಹನುಮೇಶ್ ರೆಡ್ಡಿ, ಮಲ್ಲನಗೌಡ ಪಾಟೀಲ್, ಅಯೂಬ್ ಖಾನ್, ಪ್ರಕಾಶ್ ರೆಡ್ಡಿ, ಶ್ರೀದೇವಿ ಅಡಕಿ, ಜೀವ ಪ್ರಕಾಶ್, ಯೂಸುಫ್ ಖಾನ್ ವಿವಿಧ ಪಕ್ಷದ ಹಲವಾರು ಹಿರಿಯ ಮುಖಂಡರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಜನಾರ್ಧನ ರೆಡ್ಡಿಯವರನ್ನು ನಗರದ ರೆಡ್ಡಿ ಸಮುದಾಯದ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಸೇರಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
Tags
ರಾಜಕೀಯ