2ನೇ ಪಟ್ಟಿ ಬಿಡುಗಡೆಗೆ ಜೆಡಿಎಸ್ ಸಿದ್ಧತೆ: ಮಾರ್ಚ್ 26ರ ಮುಹೂರ್ತ?
ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಮಾರ್ಚ್ 26ರಂದು ಬಿಡುಗಡೆಯಾಗಲಿದೆ ಎಂದು ಪಕ್ಷದ ವರಿಷ್ಠ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಈ ಬಾರಿ 123 ಸೀಟ್ ಗೆಲುವಿನ ಗುರಿಯೊಂದಿಗೆ ಪಕ್ಷ ಮತದಾರರ ಮುಂದೆ ಹೋಗಲಿದೆ. ರಾಜ್ಯದಲ್ಲಿ ಸುಮಾರು 16 ಕ್ಷೇತ್ರಗಳು ಪಕ್ಷಕ್ಕೆ ಸವಾಲಾಗಿದೆ. ರಾಷ್ಟ್ರೀಯ ಪಕ್ಷಗಳಲ್ಲಿ ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ. ಹೀಗಾಗಿ ಅವರುಗಳ ಟಿಕೆಟ್ ಘೋಷಣೆಯಾದ ಬಳಿಕ ಈ 16 ಕ್ಷೇತ್ರಗಳಿಗೆ ರಾಷ್ಟ್ರೀಯ ಪಕ್ಷಗಳಿಂದ ಆಕಾಂಕ್ಷಿಗಳು ಬರಲೂಬಹುದು ಎಂದು ಕುತೂಹಲ ಬಿತ್ತಿದ್ದಾರೆ.
ವರದಿ : ಬಸವರಾಜ ಕಬಡ್ಡಿ
Tags
ರಾಜಕೀಯ