Koppal, ಮಾರ್ಚ್ 5 ರಂದು ಭಾನಾಪುರ ಗ್ರಾಮದಲ್ಲಿ ರೇಣುಕಾಚಾರ್ಯ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ

ಕುಕನೂರು ತಾಲೂಕಿನ ಭಾನಾಪುರ ಗ್ರಾಮದಲ್ಲಿ ಮಾರ್ಚ್ ಐದರಂದು ರೇಣುಕಾಚಾರ್ಯ ಜಯಂತಿಯನ್ನು ಆಚರಿಸಲಾಗುವುದು. ಅಂದು ಬೆಳಿಗ್ಗೆ ಗ್ರಾಮದ ಆರಾಧ್ಯ ದೈವ ಶ್ರೀ ಈಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳನ್ನು ಕೈಗೊಂಡು ನಂತರ ದೇವಸ್ಥಾನದಿಂದ 101 ಪೂರ್ಣ ಕುಂಭಮೇಳದೊಂದಿಗೆ ಶ್ರೀ ರೇಣುಕಾಚಾರ್ಯರ ಭಾವಚಿತ್ರ ಮೆರವಣಿಗೆಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಮದ ರೇಣುಕಾಚಾರ್ಯರ ವೃತ ನಿರ್ಮಾಣ ಮಾಡಲು ಗ್ರಾಮ ಪಂಚಾಯಿತಿಯಿಂದ ಈಗಾಗಲೇ ಜಾಗವನ್ನು ಗುರುತಿಸಿ ಪರವಾನಿಗೆಯನ್ನು ಪಡೆದಿದ್ದು ಅಂದು ಸಂಕೇತಿಕವಾಗಿ ವೃತ್ತ ನಿರ್ಮಾಣ ಮಾಡಿ ಮುಂಬರುವ ದಿನಗಳಲ್ಲಿ ಅಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು.ಹಾಗೂ ಕೊಪ್ಪಳದ ಪ್ರಸಿದ್ಧ ಸೆಕ್ಯೂರ್ ಆಸ್ಪತ್ರೆ ವತಿಯಿಂದ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಅಯೋಜಿಸಿದ್ದು ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಧುಮೇಹ, ಅಧಿಕ ರಕ್ತ ಒತ್ತಡ, ಹೃದಯ ಸಂಬಂಧಿ ಕಾಯಿಲೆಗಳಿಗೆ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದೆ. ಕಾರ್ಯಕ್ರಮದ ನಂತರ ಪ್ರಸಾದ ವ್ಯವಸ್ಥೆಯನ್ನು ಸಹ ಹಮ್ಮಿಕೊಳ್ಳಲಾಗಿದೆ ಎಂದು 
 ಅಖಿಲ ಕರ್ನಾಟಕ ಬೇಡ ಜಂಗಮದ ಭಾನಾಪುರ ಗ್ರಾಮ ಘಟಕದವರು ತಿಳಿಸಿದರು
Previous Post Next Post

Contact Form

f="https://unpkg.com/video.js/dist/video-js.css" rel="stylesheet">