koppla, ಜಿಲ್ಲಾ ರಜತ ಮಹೋತ್ಸವ ಮಾ.6, ಮ್ಯಾರಥಾನ್*ಮಾ.9, ಉದ್ಯೋಗ ಮೇಳ : ಪೋಸ್ಟರ್ ಬಿಡುಗಡೆ*


ಕೊಪ್ಪಳ,: ರಜತ ಮಹೋತ್ಸವ ಪ್ರಚಾರಾರ್ಥ ಕ್ರೀಡಾ ಸಮಿತಿಯು ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮ್ಯಾರಥಾನ್ ಓಟವನ್ನು ಮಾರ್ಚ್ 06 ರಂದು ಬೆಳಿಗ್ಗೆ 07 ಗಂಟೆಗೆ ಏರ್ಪಡಿಸಿದೆ. ಮ್ಯಾರಥಾನ್ ಓಟಕ್ಕೆ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಚಾಲನೆ ನೀಡುವರು. ಓಟವು ಜಿಲ್ಲಾಧಿಕಾರಿಗಳ ಕಚೇರಿಯಿಂದ ಗವಿಮಠದವರೆಗೆ ನಡೆಯಲಿದ್ದು, ಜಿಲ್ಲೆಯ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಮ್ಯಾರಥಾನ್ ಓಟವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ರಜತ ಮಹೋತ್ಸವ ಕ್ರೀಡಾ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 *ಉದ್ಯೋಗ ಮೇಳ : ಪೋಸ್ಟರ್ ಬಿಡುಗಡೆ* 
ರಜತ ಮಹೋತ್ಸವ ನಿಮಿತ್ತ ಮಾ. 9 ರಂದು ಹಮ್ಮಿಕೊಂಡ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಎಂ.ಸುದರೇಶ ಬಾಬು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಿದರು. ಉದ್ಯೋಗ ಮೇಳವನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯ ಮಿಷನ್‌ ಇವರ ಸಂಯುಕ್ತಾಶ್ರಯದಲ್ಲಿ ಮಾ. 9 ರಂದು ಬೆಳಿಗ್ಗೆ10 ಗಂಟೆಗೆ ತಾಲೂಕ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಉಪವಿಭಾಗಾಧಿಕಾರಿಗಳಾದ ಬಸವಣ್ಣಪ್ಪ ಕಲಶೆಟ್ಟಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಉದ್ಯೋಗ ಮೇಳದಲ್ಲಿ ಕೈಗಾರಿಕೆ, ಕೃಷಿ, ಫಾರ್ಮಾ, ಹೆಲ್ತ್ ಸೆಕ್ಟರ್, ಬ್ಯಾಕಿಂಗ್, ಫೈನಾನ್ಸಿಯಲ್ಸ್ಗೆ ಸಂಬಂಧಿಸಿದ ವಿವಿಧ ಕ್ಷೇತ್ರಗಳನ್ನೊಳಗೊಂಡ ಉದ್ಯೋಗದಾತರು ಸುಮಾರು 25 ರಿಂದ 40 ಕಂಪನಿಗಳು ಭಾಗವಹಿಸುತ್ತಿವೆ. ಈ ಮೇಳದಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೊಮಾ, ಬಿ.ಇ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆವುಳ್ಳ ಉದ್ಯೋಕಾಂಕ್ಷೀಗಳು ಅಗತ್ಯ ದಾಖಲಾತಿಗಳೊಂದಿಗೆ ಭಾಗವಹಿಸಬಹುದಾಗಿದೆ. ಉದ್ಯೋಕಾಂಕ್ಷೀಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಗೂಗಲ್ ಫಾರಂ https://forms.gle/19yFsLEbDVSxLvhC9 ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅಥವಾ ಕ್ಯೂಆರ್ ಕೋಡ್ ಬಳಸಿ ನೋಂದಣಿ ಮಾಡಿಕೊಳ್ಳಬಹುದಾಗಿರುತ್ತದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಉದ್ಯೋಗದ ನೆರವಿಗಾಗಿ ‘‘ ‘‘Skill Connect’’ ಎಂಬ ಅಧಿಕೃತ ವೆಬ್ ಪೋರ್ಟಲ್‌ನ್ನು ತಯಾರಿಸಲಾಗಿದ್ದು, ವಿದ್ಯಾರ್ಹತೆ ಅನುಸಾರವಾಗಿ ವಿವಿಧ ರೀತಿಯ ಕೌಶಲ್ಯ ಅನುಭವ ಹೊಂದಿರುವ ಅಭ್ಯರ್ಥಿಗಳು https://skillconnect.kaushalkar.com/ನಲ್ಲಿ ನೋಂದಾಯಿಸಿಕೊಂಡು ಸದುಪಯೋಗ ಪಡೆದುಕೊಳ್ಳಲು ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ಕಚೇರಿಗೆ ಅಥವಾ ದೂರವಾಣಿ 08539-225901, ಮೊ: 9880758997, 9353515518, 7676172603, 9164966349ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 *ರಜತ ಮಹೋತ್ಸವ ವಿವಿಧ ಸ್ಪರ್ಧೆ :* 
ಕೊಪ್ಪಳ ಜಿಲ್ಲಾ ರಜತ ಮಹೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳನ್ನು ಮಾ. 07 ರಂದು ನಗರದ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಕೊಪ್ಪಳ ಜಿಲ್ಲಾ ಉದಯವಾದ 25 ವರ್ಷದ ಸಂಭ್ರಮದ ಅಂಗವಾಗಿ ರಜತ ಮಹೋತ್ಸವ ಜಿಲ್ಲಾ ಮಟ್ಟದ ಚಿತ್ರಕಲೆ ಸ್ಪರ್ಧೆ, ನಿಬಂಧ ಸ್ಪರ್ಧೆ ರಂಗೋಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಪ್ರಾಥಮಿಕ ಶಾಲಾ ವಿಭಾಗ ಹಾಗೂ ಪ್ರೌಢಶಾಲಾ ವಿಭಾಗದಿಂದ ಸ್ಪರ್ಧೆಗಳು ನಡೆಯಲಿವೆ.
ಸ್ವಚ್ಛ ಭಾರತ ಅಭಿಯಾನ ವಿಷಯದ ಕುರಿತು ಚಿತ್ರಕಲೆ ಸ್ಪರ್ಧೆ, ಕೊಪ್ಪಳ ಜಿಲ್ಲಾ 25 ವರ್ಷದ ಅಭಿವೃದ್ಧಿ ಕುರಿತು ನಿಬಂಧ ಸ್ಪರ್ಧೆ ಮತ್ತು ಬಾಲಕಿಯರ ಆಸಕ್ತಿಯ ರಂಗೋಲಿ ಸ್ಪರ್ಧೆ ನಡೆಯಲಿದ್ದು, ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Previous Post Next Post

Contact Form

f="https://unpkg.com/video.js/dist/video-js.css" rel="stylesheet">