koppla,ರೇಣುಕಾಚಾರ್ಯರ ಜಯಂತಿ ಆಚರಣೆ

ಕುಕನೂರು
         ತಾಲೂಕಿನ ಭಾನಾಪುರ ಗ್ರಾಮದಲ್ಲಿ ಅಖಿಲ ಕರ್ನಾಟಕ ಬೇಡ ಜಂಗಮ ಸಮಾಜದ ಗ್ರಾಮ ಘಟಕದ ವತಿಯಿಂದ ರವಿವಾರ ಹಮ್ಮಿಕೊಂಡಿದ್ದ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿಯಲ್ಲಿ ಶ್ರೀ ಯಲಬುರ್ಗಾ ಮುರಡಿ ಮಠದ ಶ್ರೀ ಬಸವಲಿಂಗ ಶಿವಾಚಾರ್ಯರು ಹೇಳಿದರು.
   ಗ್ರಾಮದಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿಯ ಅಂಗವಾಗಿ ಗ್ರಾಮದ ಆರಾಧ್ಯ ದೈವ ಶ್ರೀ ಈಶ್ವರ ದೇವಾಸ್ಥಾನದಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳನ್ನು ನೆಡೆಸಿ ದೇವಸ್ಥಾನದಿಂದ ೧೦೧ ಪೂರ್ಣಕುಂಭಮೇಳದೊoದಿಗೆ ರೇಣುಕಾಚಾರ್ಯರ ಭಾವಚಿತ್ರ ಮೆರವಣಿಗೆಯನ್ನು ನೆಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ರೈಲ್ವೇ ನಿಲ್ದಾಣದ ಬಳಿಯ ರಸ್ತೆಯಲ್ಲಿ ಶ್ರೀ ಆದಿ ಜಗದ್ಗುರು ರೇಣುಕಾಚಾರ್ಯರ ವೃತ್ತವನ್ನು ಉಧ್ಘಾಟಿಸಿ ಮಾತನಾಡಿದ ಅವರು ರೇಣುಕಾಚಾರ್ಯರು ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ನೀಡಿದ್ದಾರೆ. ಸಾಮರಸ್ಯ ಸಹಬಾಳ್ವೆ, ಸೌಹಾರ್ದತೆ ಬದುಕನ್ನು ಅವರು ಬೋದಿಸಿದ್ದಾರೆ. ಇಂತಹ ಮಹಾನ್ ವ್ಯಕ್ತಿಯ ಜಯಂತಿಯನ್ನು ಆಚರಿಸುವಲ್ಲಿ ಭಾನಾಪೂರ ಗ್ರಾಮ ಮಾದರಿಯಾಗಿದೆ ಎಂದು ಹೇಳಿದರು. 
ಈ ಸಂದರ್ಭದಲ್ಲಿ ಮೈನಹಳ್ಳಿ ಶ್ರೀಗಳು ಹಾಗೂ ಚಿಕ್ಕಮ್ಯಾಗೇರಿಯ ಶ್ರೀಗಳ ಸಾನಿಧ್ಯವನ್ನು ವಹಿಸಿದ್ದರು. ಹಾಗೂ ಭಾನಾಪೂರ ಗ್ರಾಮದ ಎಲ್ಲಾ ಬೇಡ ಜಂಗಮ ಸಮಾಜದವರು, ಮಹಿಳೆಯರು ಮಕ್ಕಳು ಹಾಗೂ ಇತರರಿದ್ದರು.
Previous Post Next Post

Contact Form

f="https://unpkg.com/video.js/dist/video-js.css" rel="stylesheet">