ಪತ್ರಕರ್ತರಿಗೆ ತಾವು ಕೆಲಸ ಮಾಡುವ ಸ್ಥಳದಿಂದಲೇ ಮತದಾನಕ್ಕೆ ಅವಕಾಶ!
ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಇಂದು ಘೋಷಣೆಯಾಗಿದ್ದು, ಈ ಬಾರಿ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ತಾವು ಕೆಲಸ ಮಾಡುವ ಸ್ಥಳದಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಮಾನ್ಯತಾ ಕಾರ್ಡ್ ಹೊಂದಿರುವ ಪತ್ರಕರ್ತರು, ತಮ್ಮ ಸಂಸ್ಥೆಯ ಒಪ್ಪಿಗೆಯೊಂದಿಗೆ ಮತದಾನವನ್ನು ಮಾಡಬಹುದು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ.
ವರದಿ : ಬಸವರಾಜ ಕಬಡ್ಡಿ
Tags
ರಾಜಕೀಯ