ಶಿರಹಟ್ಟಿ ಶ್ರೀ ಫಕ್ಕೀರೇಶ್ವರ ಸ್ವಾಮಿ ಮಠದಲ್ಲಿ ರಾಜು ನಾಯಕವಾಡಿಯವರಿಗೆ ಸನ್ಮಾನ
ಹುಬ್ಬಳ್ಳಿ : ಮುಂದಿನ ಮುಖ್ಯಮಂತ್ರಿ ಮಾನ್ಯ ಶ್ರೀ ಎಚ್.ಡಿ. ಕುಮಾರಸ್ವಾಮಿ ಅವರ ಪಂಚರತ್ನ ಯೋಜನೆಗಳು ಜಾರಿಯಾಗಲು ಮುಂದಿನ ಶಾಸಕರಾಗುವ ಎಲ್ಲ ಅರ್ಹತೆ ಹೊಂದಿರುವ ಹುಬ್ಬಳ್ಳಿಯ ಎಸ್ ಎಸ್ ಕೆ ಶ್ರೀ ಸಹಸ್ರಾರ್ಜುನ ಸೋಮವಂಶ ಕ್ಷತ್ರೀಯ ಸಮಾಜದ ಧಾರವಾಡ ಜಿಲ್ಲಾ ಯುವ ಘಟಕದ ಅಧ್ಯಕ್ಷ, ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಹಾಗೂ ನಿಯೋಜಿತ ಜೆಡಿಎಸ್ ಪಕ್ಷದ ಅಭ್ಯರ್ಥಿ ರಾಜು ಅನಂತಸಾ ನಾಯಕವಾಡಿ ಅವರು ಹೆಚ್ಚಿನ ಜನಸೇವೆ ಮಾಡುವಂತಾಗಲಿ ಎಂದು ಗದಗ ಜಿಲ್ಲೆಯ ಶಿರಹಟ್ಟಿಯ ಶ್ರೀ ಫಕ್ಕೀರೇಶ್ವರ ಸ್ವಾಮಿ ಮಠದ ಶ್ರೀಗಳು ಹೇಳಿದರು.
ಅವರು ಇತ್ತೀಚೆಗೆ ಶಿರಹಟ್ಟಿಯ ಶ್ರೀ ಫಕ್ಕೀರೇಶ್ವರ ಸ್ವಾಮಿ ಮಠಕ್ಕೆ ಭೇಡಿದ್ದ ರಾಜು ನಾಯಕವಾಡಿ ಅವರನ್ನು ಸತ್ಕರಿಸಿ, ಸನ್ಮಾನಿಸಿ ಆರ್ಶಿವಾದ ಮಾಡಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜು ನಾಯಕವಾಡಿ, ನಮ್ಮ ಜೆಡಿಎಸ್ ಪಕ್ಷದ ಪಂಚರತ್ನ ಯೋಜನೆಗಳಾದ
ಶಿಕ್ಷಣವೇ ಅಧುನಿಕ ಶಕ್ತಿ, ಆರೋಗ್ಯವೇ ಸಂಪತ್ತು, ರೈತ ಚೈತನ್ಯ, ವಸತಿಯ ಆಸರೆ, ಯುವಜನ ಮಾರ್ಗ & ಮಹಿಳಾ ಸಬಲೀಕರಣ, ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಸೇರಿದಂತೆ ಎಲ್ಲವನ್ನು ಅಧಿಕಾರಕ್ಕೆ ಬಂದ ಕೂಡಲೇ ಮುಂದಿನ ಮುಖ್ಯಮಂತ್ರಿ ಮಾನ್ಯ ಶ್ರೀ ಎಚ್.ಡಿ. ಕುಮಾರಸ್ವಾಮಿಯವರು ಜಾರಿಗೆ ತರಲಿದ್ದಾರೆ ಎಂದರು.
ಈ ಹಿಂದೆ ಜೆಡಿಎಸ್ ಪಕ್ಷ ಅಧಿಕಾರದಲ್ಲಿದ್ದಾಗ ಧಾರವಾಡ ಜಿಲ್ಲೆಗೆ ಪ್ರಮುಖ ಕೊಡುಗೆಗಳನ್ನು ನೀಡಲಾಗಿತ್ತು. ಅವುಗಳಲ್ಲಿ ಮುಖ್ಯವಾದವು ಧಾರವಾಡದ ಬೇಲೂರ ಕೈಗಾರಿಕಾ ವಲಯ ಸ್ಥಾಪಿಸುವ ಮೂಲಕ ಸ್ಥಳೀಯರಿಗೆ ಅಪಾರ ಉದ್ಯೋಗಾವಕಾಶ ದೊರಕಿವೆ. ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ಮಾಣ ಮಾಡಿದ್ದು. ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ. ಧಾರವಾಡಕ್ಕೆ ಹೈಕೋರ್ಟ ಪೀಠ ಸ್ಥಾಪನೆಗೆ ನಿರ್ಣಯ, ಉತ್ತರ ಕರ್ನಾಟಕದ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣ ನಿರ್ಧಾರ. ಕುಮಾರಣ್ಣ ಅವರಿಂದ ರೈತರ ಸಾಲ ಮನ್ನಾ. ಸೇರಿದಂತೆ ಅಪಾರ ಕೊಡುಗೆ ನೀಡಲಾಗಿದೆ. ಆದ್ದರಿಂದ ಜನರು ಇದಕ್ಕೊಂದೇ ಪರಿಹಾರವೆಂಬಂತೆ, 2023ಕ್ಕೆ ಪ್ರಾದೇಶಿಕ ಪಕ್ಷವನ್ನು ಅಧಿಕಾರ ತರಲಿ ಎಂದು ಶಿರಹಟ್ಟಿಯ ಶ್ರೀ ಫಕ್ಕೀರೇಶ್ವರ ಸ್ವಾಮಿಗಳಲ್ಲಿ ನಾನು ಬೇಡಿಕೊಳ್ಳುತ್ತೇನೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಬೆಂಬಲಿಗರು, ಜೆಡಿಎಸ್ ಪಕ್ಷದ ಮಹಿಳಾ ಘಟಕದ ಪದಾಧಿಕಾರಿಗಳು, ವಿವಿಧ ಸಮಾಜದ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Tags
ರಾಜಕೀಯ