Vijayapura :ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ, ಐವರು ಕಾರ್ಮಿಕರಿಗೆ ಗಂಭೀರ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ, ಐವರು ಕಾರ್ಮಿಕರಿಗೆ ಗಂಭೀರ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಾಪಿಸಿದ್ದ ಹೊಸ ಬಾಯ್ಲರ್‌ ಒಂದು ಪ್ರಾಯೋಗಿಕ ಪರೀಕ್ಷೆ ವೇಳೆ ಸ್ಫೋಟಗೊಂಡಿದೆ.

ಘಟನೆಯಲ್ಲಿ ಐವರು ಕಾರ್ಮಿಕರಿಗೆ ಗಾಯಗಳಾಗಿದ್ದು, ಅವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಈ ಕಾರ್ಖಾನೆಯಲ್ಲಿ ಪೂನಾದ ಎಸ್ ಎಸ್ ಎಂಜಿನಿಯರ್ಸ್ ಕಂಪನಿ 220 ಟನ್ ಕೆಪಾಸಿಟಿ ಹೊಂದಿದ್ದ ನೂತನ ಬಾಯ್ಲರ್‌ ಒಂದನ್ನು ಅಳವಡಿಸಿತ್ತು. ಸುಮಾರು 51 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ನೂತನ ಬಾಯ್ಲರ್‌ನ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ಬಾಯ್ಲರ್‌ ಸ್ಫೋಟಗೊಂಡು ಬಿಹಾರ ಮೂಲದ ಐವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ
ನಿನ್ನೆ ಮಧ್ಯಾಹ್ನ 2.30ಕ್ಕೆ ನಡೆದಿರುವ ಘಟನೆಯಲ್ಲಿ ದೊಡ್ಡ ಮಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಾಗಲಕೋಟೆ, ಮುಧೋಳ, ಬೀಳಗಿ, ವಿಜಯಪುರ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಎರಡು ಗಂಟೆಯಿಂದ ಬೆಂಕಿ ನಂದಿಸುತ್ತಿದ್ದಾರೆ. ಗಾಯಾಳುಗಳಿಗೆ ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ. ನೀಡಲಾಗುತ್ತಿದೆ.

ವರದಿ: ವಿ.ಜಿ.ವೃಷಭೇಂದ್ರ
Previous Post Next Post

Contact Form

f="https://unpkg.com/video.js/dist/video-js.css" rel="stylesheet">