BJP :ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ Count Down ಶುರು..!!

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕೌಂಟ್ ಡೌನ್ ಶುರು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ(ಬುಧವಾರ) ಬಿಡುಗಡೆಯಾಗುವ ಎಲ್ಲ ಲಕ್ಷಣಗಳು ಕಂಡು ಬಂದಿವೆ. ಈ ನಡುವೆ ಟಿಕೆಟ್ಕಾಂಕ್ಷಿಗಳಲ್ಲಿ ಎದೆ ಬಡಿತ ತೀವ್ರಗೊಂಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸದಿಲ್ಲಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿ, ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಂಬಂಧಿಸಿದಂತೆ ರೋಡ್ ಮ್ಯಾಪ್ ಸಿದ್ಧವಾಗಿದೆ. ಕೇಂದ್ರ ಗೃಹ ಸಚಿವರು ಸೋಮವಾರ ದಿಲ್ಲಿಯಿಂದ ಹೊರಗಡೆ ಇದ್ದ ಕಾರಣ ಮಂಗಳವಾರ ತಡರಾತ್ರಿ ಅಥವಾ ಬುಧವಾರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ.

ಇದಕ್ಕೆ ಮುನ್ನ ದೆಹಲಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಕೇಂದ್ರ ಸಂಸದೀಯ ವ್ತವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರು ಮಂಗಳವಾರ ತಡರಾತ್ರಿ ಬಳಿಕ ಯಾವುದೇ ಕ್ಷಣದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದರು.

Read Also :ಟಿಕೆಟ್ ಜಿದ್ದಾ ಜಿದ್ದಿ : ಜೋರಾಯ್ತು ಹಾಲಪ್ಪ  ಆಚಾರ್ - ನವೀನ್ ಕುಮಾರ್ ಫ್ಯಾನ್ಸ್ ಅಬ್ಬರ-Yalaburga

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ದಿನ ದಿಲ್ಲಿಯಲ್ಲಿ ಇರದ ಹಿನ್ನೆಲೆಯಲ್ಲಿ ಮಂಗಳವಾರ ಅಮಿತ್ ಶಾ ಅವರೊಂದಿಗೆ ಚರ್ಚಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಒಪ್ಪಿಗೆ ಪಡೆದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ಪಟ್ಟಿ ಈಗಾಗಲೇ ಅಂತಿಮಗೊಂಡಿದೆ. ಕೊನೆಯ ಕ್ಷಣದ ಬದಲಾವಣೆ ಇರಲೂ ಸಾಕು ಎಂದು ಅವರು ನುಡಿದ್ದರು.

Previous Post Next Post

Contact Form

f="https://unpkg.com/video.js/dist/video-js.css" rel="stylesheet">