16 ಜನ ಬಿಜೆಪಿ ಪಾಲಿಕೆ ಸದಸ್ಯರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ
ಹುಬ್ಬಳ್ಳಿ: ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು, ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಹಾಲಿ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ನೀಡುವಲ್ಲಿ ವಿಳಂಬ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ, ಇಂದು ಬಿಜೆಪಿಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 16 ಸದಸ್ಯರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಪತ್ರ ಬರೆದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ ಕಟೀಲ್ ಅವರಿಗೆ ಸಲ್ಲಿಸಿದ್ದಾರೆ.
ಸತತ ಆರು ಬಾರಿ ಗೆಲುವು ಕಂಡ ಜಗದೀಶ್ ಶೆಟ್ಟರ್ ಅವರಿಗೆ ಸೆಂಟ್ರಲ್ ಕ್ಷೇತ್ರಕ್ಕೆ ಟಿಕೆಟ್ ನೀಡಲು ಹೈ ಕಮಾಂಡ್ ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರರಾದ ಮಲ್ಲಿಕಾರ್ಜುನ ಗುಂಡೂರ, ರಾಜಣ್ಣ ಕೊರವಿ, ಉಮೇಶಗೌಡ ಕೌಜಗೇರಿ, ತಿಪ್ಪಣ್ಣ ಮಜ್ಜಿಗಿ, ಸೀಮಾ ಮುಗಲಿಶೆಟ್ಟರ, ಸಂತೋಷ ಚವ್ಹಾಣ, ಮಹದೇವಪ್ಪ ನರಗುಂದ, ಬೀರಪ್ಪ ಖಂಡೇಕರ, ಉಮಾ ಮುಕುಂದ, ವೀರಣ್ಣ ಸವಡಿ, ರೂಪಾ ಶೆಟ್ಟಿ, ಕಿಶನ್ ಬೆಳಗಾವಿ, ವೀಣಾ ಬರದ್ವಾಡ, ಸರಸ್ವತಿ ಧೋಂಗಡಿ, ಚಂದ್ರಿಕಾ ವೆಂಕಟೇಶ ಮೇಸ್ತ್ರಿ, ಮೀನಾಕ್ಷಿ ವಂಟಮೂರಿ ಈ 16 ಜನ ಬಿಜೆಪಿ ಪಾಲಿಕೆ ಸದಸ್ಯರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ವರದಿ : ಬಸವರಾಜ ಕಬಡ್ಡಿ
Tags
ರಾಜಕೀಯ