BJP Ticket : ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಬಿಎಸ್‌ವೈ


ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಬಿಎಸ್‌ವೈ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇವಲ ಒಂದು ತಿಂಗಳು ಮಾತ್ರ ಬಾಕಿಯಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗಲಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದ್ದು, 170-180 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.

ಅಭ್ಯರ್ಥಿ ಪಟ್ಟಿ ಬಿಡುಗಡೆಯ ಮುನ್ನ ಬಿಜೆಪಿ ನಾಯಕರು ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಒಟ್ಟಾರೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಟಿಕೆಟ್‌ ಆಕಾಂಕ್ಷಿಗಳಲ್ಲಿ ಎದೆಬಡಿತ ಜೋರಾಗಿದೆ.


Reported By : Basavaraj Kabaddi

Previous Post Next Post

Contact Form

f="https://unpkg.com/video.js/dist/video-js.css" rel="stylesheet">