BJP : ಸುದೀಪ್ ಗೆ ರಿಲೀಫ್: ಸಿನಿಮಾ, ಜಾಹೀರಾತು, ರಿಯಾಲಿಟಿ ಶೋ ಪ್ರದರ್ಶನಕ್ಕೆ ನಿರ್ಬಂಧವಿಲ್ಲ ಎಂದ ಆಯೋಗ

ಸುದೀಪ್ ಗೆ ರಿಲೀಫ್: ಸಿನಿಮಾ, ಜಾಹೀರಾತು, ರಿಯಾಲಿಟಿ ಶೋ ಪ್ರದರ್ಶನಕ್ಕೆ ನಿರ್ಬಂಧವಿಲ್ಲ ಎಂದ ಆಯೋಗ

ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ಮುಂದಾಗಿರುವ ನಟ ಕಿಚ್ಚ ಸುದೀಪ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅವರು ನಟಿಸಿರುವ ಜಾಹೀರಾತುಗಳ ಪ್ರದರ್ಶನಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.

ಚುನಾವಣೆಗೆ ಸ್ಪರ್ಧಿಸುವ ಅಥವಾ ದೂರದರ್ಶನದಲ್ಲಿ ಪ್ರಚಾರ ಮಾಡುವ ನಟರನ್ನು ಮಾತ್ರ ವಾಣಿಜ್ಯ ಪ್ರದರ್ಶನದಿಂದ ನಿರ್ಬಂಧಿಸಬಹುದು ಎಂದು ಸ್ಪಷ್ಟಪಡಿಸಿದೆ.

ಚುನಾವಣೆಯಲ್ಲಿ ಸಿಎಂ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ಮಾಡುತ್ತೇನೆ ಸುದೀಪ್ ಎಂದು ಹೇಳಿದ್ದರು. ಈ ವೇಳೆ ಸುದೀಪ್ ಅವರ ಸಿನಿಮಾ, ಜಾಹೀರಾತುಗಳ ಪ್ರದರ್ಶನಕ್ಕೆ ನಿರ್ಬಂಧ ಹೇರುವಂತೆ ಚುನಾವಣೆ ಆಯೋಗಕ್ಕೆ ಜೆಡಿಎಸ್ ಪತ್ರ ಬರೆದು ದೂರು ನೀಡಿತ್ತು.

ವರದಿ : ಬಸವರಾಜ ಕಬಡ್ಡಿ
Previous Post Next Post

Contact Form

f="https://unpkg.com/video.js/dist/video-js.css" rel="stylesheet">