ಇಂದಿನಿಂದ ನಾಮಪತ್ರ ಸಲ್ಲಿಕೆ ಪಕ್ರಿಯೆ ಪ್ರಾರಂಭ
ಕೊಪ್ಪಳ : ಕರ್ನಾಟಕ ವಿಧಾನಸಭಾ ಚುನಾವಣೆ 2023 ಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಅಧಿಸೂಚನೆ ಜೊತೆಗೆ ಚುನಾವಣೆ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ.
ಇಂದಿನಿಂದ ಮತ ಎಣಿಕೆ ನಡೆಯುವ ದಿನ ಮೇ 13 ವರೆಗೂ ಒಂದು ತಿಂಗಳ ಕಾಲ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಇಂದಿನಿಂದ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಆಯಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ಮದ್ಯಾಹ್ನ 3 ರ ವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅವಕಾಶ ಇದೆ. ಅಭ್ಯರ್ಥಿಗಳು ಸರ್ಕಾರಿ ರಜಾ ದಿನಗಳನ್ನು ಬಿಟ್ಟು ಉಳಿದ ದಿನಗಳಲ್ಲಿ ನಾಮಪತ್ರ ಸಲ್ಲಿಸಬಹುದು. ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿರುತ್ತದೆ.
ಇಂದಿನಿಂದ ರಾಜಕೀಯ ಚಟುವಟಿಕೆಗಳು ಬಿರುಸು ಪಡೆಯಲಿದ್ದು, ರಾಜ್ಯ ಚುನಾವಣೆ ಆಯೋಗ ಸುಸೂತ್ರ, ನ್ಯಾಯ ಸಮ್ಮತ ಚುನಾವಣೆಗೆ ಮತ್ತಷ್ಟು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.
ಚುನಾವಣೆ ಪ್ರಕ್ರಿಯೆ ವಿವರ ಹೀಗಿದೆ :
ಏಪ್ರಿಲ್ 13 - ಅಧಿಸೂಚನೆ, ನಾಮಪತ್ರ ಸಲ್ಲಿಕೆ ಪ್ರಾರಂಭ
ಏಪ್ರಿಲ್ 20 - ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ
ಏಪ್ರಿಲ್ 21 - ನಾಮಪತ್ರ ಪರಿಶೀಲನೆ
ಏಪ್ರಿಲ್ 24 - ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನ
ಮೇ 10 - ಮತದಾನ
ಮೇ 13 - ಮತ ಎಣಿಕೆ
ವರದಿ : ಈರಯ್ಯ ಕುರ್ತಕೋಟಿ
Tags
ರಾಜ್ಯ