ಕೆ ಆರ್ ಪೇಟೆ: ದೇಶದಲ್ಲಿ ನುಡಿದಂತೆ ನಡೆಯುವ ಯಾರಾದರೂ ಮುಖ್ಯಮಂತ್ರಿ ಇದ್ದರೆ ಅವರೇ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಎಂದು ಮಾಜಿ ಸಚಿವ ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿ ಎಸ್ ಪುಟ್ಟರಾಜು ಬಣ್ಣಿಸಿದರು
ಅವರು ಕೃಷ್ಣರಾಜಪೇಟೆ ಪಟ್ಟಣದ ಟಿಎಪಿಸಿಎಂಎಸ್ ಎಸ್ ಎಂ ಲಿಂಗಪ್ಪ ಸಮುದಾಯ ಭವನದ ಆವರಣದಲ್ಲಿ ನಡೆದ ಮನ್ಮುಲ್ ನಿರ್ದೇಶಕ ಡಾಲು ರವಿ ಹಾಗೂ ಅವರ ಅಭಿಮಾನಿಗಳು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಕುಮಾರಣ್ಣ ಮುಖ್ಯಮಂತ್ರಿ ಆಡಳಿತದ ಅವಧಿಯಲ್ಲಿ ಕೊಟ್ಟಂತಹ ಜನಪರ ಕಾರ್ಯಕ್ರಮಗಳನ್ನು ಜನತೆ ಇಂದಿಗೂ ಮರೆತಿಲ್ಲ.ರೈತರ ಸಾಲ ಮನ್ನಾ,ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಒತ್ತುಕೊಟ್ಟಿದ್ದರು.ರೈತರ ಬಗ್ಗೆ ಅತಿ ಹೆಚ್ಚಿನ ರೀತಿಯಲ್ಲಿ ಚಿಂತನೆಯನ್ನು ನಮ್ಮ ಪಕ್ಷದ ಪ್ರಶ್ನಾತೀತ ನಾಯಕರಾದ ಹೆಚ್ ಡಿ ದೇವೇಗೌಡ್ರು ಮಾಡುವರು.ನಮ್ಮ ನಾಡು ಉಳಿಯಬೇಕಾದರೆ ಪ್ರಾದೇಶಿಕ ಪಕ್ಷದ ಜಾತ್ಯಾತೀತ ಜನತಾದಳ ಪಕ್ಷವನ್ನು ನೀವೆಲ್ಲರೂ ಬೆಂಬಲಿಸಬೇಕು.ನಮ್ಮ ಪಕ್ಷದ ವರಿಷ್ಠರು ಈ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿ ಮಂಜಣ್ಣ ಅವರನ್ನು ಆಯ್ಕೆ ಮಾಡಿದ್ದಾರೆ. ತಳಮಟ್ಟದಿಂದ ಮೇಲ್ಮಟ್ಟಕ್ಕೆ ಸಾಕಷ್ಟು ಪರಿಶ್ರಮದಿಂದ ಬಂದಿದ್ದಾರೆ. ರೈತರ ಕಷ್ಟ ಸುಖಗಳನ್ನು ಅರಿತಿರುವ ಮಂಜು ಅವರನ್ನು ತಾಲ್ಲೂಕಿನ ಪ್ರಜ್ಞಾವಂತ ಮತದಾರರು ಅತಿ ಹೆಚ್ಚಿನ ಮತಗಳಿಂದ ಗೆಲ್ಲಿಸುವುದರ ಮೂಲಕ ಮಾಜಿ ಪ್ರಧಾನ ಮಂತ್ರಿ ದೇವೇಗೌಡ್ರು ಅವರಿಗೆ ಶಕ್ತಿ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಣ್ಣ ಅವರ ಕೈಯನ್ನು ಬಲಪಡಿಸುವಂತೆ ಮನವಿ ಮಾಡಿದರು.
ಪಕ್ಕದ ಕ್ಷೇತ್ರ ಚನ್ನರಾಯಪಟ್ಟಣ ಶಾಸಕ ಸಿ ಎನ್ ಬಾಲಕೃಷ್ಣ ಮಾತನಾಡಿ ನಮ್ಮ ದೇಶದ ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ್ರು ಅವರ ಮಾರ್ಗದರ್ಶನದಲ್ಲಿ ಜೆಡಿಎಸ್ ಪಕ್ಷವು ಈ ಬಾರಿ ವಿಧಾನ ಸಭಾ ಚುನಾವಣೆಯನ್ನು ಎದುರಿಸುತ್ತಿದೆ.ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ವಿಧಾನ ಚುನಾವಣೆಯಲ್ಲಿ ಸ್ವಂತ ಬಲದಿಂದ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ.ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಆಗುವುದರಲ್ಲಿ ಸಂಶಯವಿಲ್ಲ. ಹಗಲಿರುಳು ಎನ್ನದೇ ರಾಜ್ಯಾದ್ಯಂತ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ. ರಾಜ್ಯದಲ್ಲಿ ರೈತರು ಮಹಿಳೆಯರು, ಯುವಕರು ಉಳಿಯಬೇಕಾದರೆ ರೈತರ ಪಕ್ಷ ಜೆಡಿಎಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು.ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಕನಸಿನ ಕೂಸು ಪಂಚರತ್ನ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಈಗಾಗಲೇ ಯೋಜನೆಗಳನ್ನು ರೂಪಿಸಲಾಗಿದೆ. ಪಂಚರತ್ನ ಯೋಜನೆಗಳು ಅನುಷ್ಠಾನಕ್ಕೆ ಬಂದರೆ ರಾಜ್ಯದಲ್ಲಿ ಜನತೆ ನೆಮ್ಮದಿಯಿಂದ ಜೀವನ ಸಾಗಿಸಬಹುದು.ಕೃಷ್ಣರಾಜಪೇಟೆ ಕ್ಷೇತ್ರ ಬೇರೆ ಅಲ್ಲ ನನ್ನ ಕ್ಷೇತ್ರ ಬೇರೆ ಅಲ್ಲ.ನನಗೆ ಇವು ಎರಡು ಕಣ್ಣುಗಳಿದ್ದಂತೆ. ಆದ್ದರಿಂದ ನಮ್ಮ ಪಕ್ಷದಿಂದ ಸ್ಪರ್ಧಿಸಿರುವ ಹೆಚ್ ಟಿ ಮಂಜು ಅವರಿಗೆ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ ಅತ್ಯಧಿಕ ಮತಗಳಿಂದ ಗೆಲ್ಲಿಸುವುದರ ಮೂಲಕ ಜೆಡಿಎಸ್ ಪಕ್ಷಕ್ಕೆ ನಿಮ್ಮೆಲ್ಲರ ಆಶೀರ್ವಾದ ಮಾಡಿ ಎಂದು ಎಲ್ಲರಲ್ಲೂ ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಮನ್ಮುಲ್ ನಿರ್ದೇಶಕ ಡಾಲು ರವಿ ಮಾತನಾಡಿ ದೇವೇಗೌಡ್ರು ಬಗ್ಗೆ ನನಗೆ ಅಪಾರವಾದ ಗೌರವ ಇದೆ.ಮಾಜಿ ಮುಖ್ಯಮಂತ್ರಿ ಕುಮಾರಣ್ಣ ಅವರ ಆಡಳಿತ ವೈಖರಿಯನ್ನು ನೋಡಿ ಒಪ್ಪಿ ಯಾವುದೇ ಷರತ್ತುಗಳಿಲ್ಲದೇ ಜೆಡಿಎಸ್ ತತ್ವ ಸಿದ್ದಾಂತಗಳನ್ನು ಒಪ್ಪಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಅಭ್ಯರ್ಥಿ ಹೆಚ್ ಟಿ ಮಂಜು ಅವರ ಜೊತೆ ಮನ್ಮುಲ್ ನಲ್ಲಿ ಒಡನಾಡಿಯಾಗಿ ಸಹಾಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇವೆ.ಮಂಜು ಅವರ ಉತ್ತಮ ನಡೆವಳಿಕೆಯನ್ನು ಒಪ್ಪಿದ್ದೇನೆ.ಇವರು ಶಾಸಕರಾದರೆ ಕ್ಷೇತ್ರವನ್ನು ಅಭಿವೃದ್ಧಿಯನ್ನು ಕಾಣಬಹುದು ಎಂಬ ನಂಬಿಕೆ ಇದೆ. ಇವರ ಗೆಲುವಿಗೆ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ.ಮಂಜಣ್ಣ ಗೆದ್ದರೆ ನಾವು ನೀವೆಲ್ಲರೂ ಗೆದ್ದಂತೆ ಭಾವಿಸಿ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಕುಮಾರಣ್ಣ ಅವರ ಕೈಯನ್ನು ಬಲಪಡಿಸೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಚನ್ನರಾಯಪಟ್ಟಣ ಶಾಸಕ ಸಿ ಎನ್ ಬಾಲಕೃಷ್ಣ, ಜೆಡಿಎಸ್ ಅಭ್ಯರ್ಥಿ ಹೆಚ್. ಟಿ.ಮಂಜು,ಮನ್ಮುಲ್ ನಿರ್ದೇಶಕ ಡಾಲು ರವಿ, ತಾಲೂಕು ಘಟಕದ ಅಧ್ಯಕ್ಷ ಜಾನಕೀರಾಂ, ಎಂಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೊಸಹೊಳಲು ಅಶೋಕ್,ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಧನಂಜಯಕುಮಾರ್, ಟಿಎಪಿಸಿಎಂಎಸ್ ನಿರ್ದೇಶಕ ಬಲದೇವ್, ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಶೀಳನೆರೆ ಮೋಹನ್,ರೈತ ಸಂಘದ ಕಾರಿಗನಹಳ್ಳಿ ಕುಮಾರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ ಎಂ. ಕಿರಣ್ ತಾ.ಪಂ.ಮಾಜಿ ಸದಸ್ಯ ಮೂಡನಹಳ್ಳಿ ನಾಗೇಂದ್ರಕುಮಾರ್,ಕಾಯಿ ಮಂಜೇಗೌಡ, ರವಿಕುಮಾರ್,ಜಿಲ್ಲಾ ಉಪಾಧ್ಯಕ್ಷ ಅಗ್ರಹಾರಬಾಚಹಳ್ಳಿ ನಾಗೇಶ್,ಪುರಸಭಾ ಮಾಜಿ ಸದಸ್ಯ ಕೆ ಆರ್ ಹೇಮಂತಕುಮಾರ್, ಸದಸ್ಯ ಗಿರೀಶ್, ಇಂದ್ರಾಣಿವಿಶ್ವನಾಥ್, ಟಿಎಪಿಸಿಎಂಎಸ್ ನಿರ್ದೇಶಕ ಮಂಜುನಾಥ್,ಕೈಗೋನಹಳ್ಳಿ ಜಯರಾಂ, ಅಂಬರೀಶ್,ಲಕ್ಷ್ಮೀಪುರ ಗ್ರಾ.ಪಂ.ಅಧ್ಯಕ್ಷ ರಾಘು(ಗುಂಡ),ಉದ್ಯಮಿ ಸಂತೋಷ್,ಬಳ್ಳೇಕೆರೆ ಗ್ರಾ.ಪಂ.ಅಧ್ಯಕ್ಷ ಚೆನ್ನಿಗಯ್ಯ, ರುದ್ರಪ್ಪ,ಸಾಧುಗೋನಹಳ್ಳಿ ಲೋಕೇಶ್, ಲೆನಿನ್ ಹೌಸ್ ಲೋಕೇಶ್, ಅತೀಕ್,ತನ್ವೀರ್,ಚೌಡೇನಹಳ್ಳಿ ನಾಗರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ
Tags
ರಾಜಕೀಯ