ಕೆ.ಆರ್.ಪೇಟೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್.ದೇವರಾಜು ಅವರ ಚುನಾವಣಾ ಪ್ರಚಾರದ ಖರ್ಚಿಗಾಗಿ ಒಂದು ಲಕ್ಷರೂ ದೇಣಿಗೆ ನೀಡಿದ ಜೆಡಿಎಸ್ ಮುಖಂಡ ಚಿಕ್ಕತರಹಳ್ಳಿ ಈರಪ್ಪಗೌಡ
ಕಿಕ್ಕೇರಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್. ಬಿರುಸಿನ ಪ್ರಚಾರ
ಕೆ.ಆರ್.ಪೇಟೆ ತಾಲ್ಲೂಕಿನ ಹಿರಿಯ ಜೆಡಿಎಸ್ ದಲಿತ ಮುಖಂಡ ಜಿಲ್ಲಾ ಪಂಚಾಯತಿ ಮಾಜಿಸದಸ್ಯ ಹಿರಿಕಳಲೆ ರಾಮದಾಸ್ ಕಾಂಗ್ರೆಸ್ ಸೇರ್ಪಡೆ..ಕಾಂಗ್ರೆಸ್ ಅಭ್ಯರ್ಥಿ ದೇವರಾಜು ಅವರ ಪರವಾಗಿ ಬಿರುಸಿನ ಪ್ರಚಾರ ನಡೆಸಿದ ರಾಮದಾಸ್
ಕಾಂಗ್ರೆಸ್ ಅಭ್ಯರ್ಥಿಯ ಪ್ರಚಾರಕ್ಕೆ ಸಾಥ್ ನೀಡಿದ ಮಾಜಿಶಾಸಕ ಕೆ.ಬಿ.ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್, ಬಿ.ನಾಗೇಂದ್ರಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕೆ.ಬಿ.ಪ್ರತಿಮಾ, ಆದಿಹಳ್ಳಿ ಮೀನಾಕ್ಷಿ ಹಾಗೂ ನೂರಾರು ಕಾಂಗ್ರೆಸ್ ಮುಖಂಡರು.
ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ದಕ್ಷ ಜನಪರವಾದ ಆಡಳಿತ ತರಲು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದ ದೇವರಾಜು ಭ್ರಷ್ಟಾಚಾರ ಮುಕ್ತ ಆಡಳಿತವು ನನ್ನ ಗುರಿಯಾಗಿದೆ. ಅಭಿವೃದ್ಧಿ ಪಥದತ್ತ ರಾಜ್ಯವನ್ನು ಮುನ್ನಡೆಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಲು ಬದ್ಧವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಮೊದಲ ಪ್ರಾಶಸ್ತ್ಯ ಮತ ನೀಡಿ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದ ದೇವರಾಜು 40ವರ್ಷಗಳ ನನ್ನ ಸುದೀರ್ಘ ಸೇವೆ ಸಲ್ಲಿಸಿದ ಜೆಡಿಎಸ್ ಪಕ್ಷದ ವರಿಷ್ಠರು ನನಗೆ ಟಿಕೆಟ್ ನೀಡದೇ ಅನ್ಯಾಯ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಿಮ್ಮ ಮುಂದೆ ಬಂದಿದ್ದೇನೆ. ದಯಮಾಡಿ ನನಗೊಂದು ಅವಕಾಶ ಮಾಡಿಕೊಡಿ ಎಂದು ಕೈಮುಗಿದು ಮನವಿ ಮಾಡಿದರು..
ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಮತಯಾಚನೆಯ ಪ್ರಚಾರದಲ್ಲಿ ಭಾಗವಹಿಸಿದ್ದರು.
*ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ*