ವಿಶ್ವ ಮಾನವ, ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ರವರ 132ನೇ ಜಯಂತಿಯನ್ನು ಆಚರಣೆ ಮಾಡಲಾಯಿತು.
ಯೆಸ್ ವೀಕ್ಷಕರೇ, ಇಂದು ಬಾಬಾ ಸಾಹೇಬರ ಜನ್ಮದಿನ, ವಿಶ್ವದಾದ್ಯಂತ ಡಾ.ಬಿ ಆರ್ ಅಂಬೇಡ್ಕರ್ ರವರ ಜಯಂತಿಯನ್ನು ಆಚರಿಸಲಾಗುತ್ತದೆ. ಇನ್ನೂ ಬಳ್ಳಾರಿ ಕಂಪ್ಲಿ ತಾಲೂಕಿನಲ್ಲಿ ಭೀಮ್ ಆರ್ಮಿ ವತಿಯಿಂದ ಅಂಬೇಡ್ಕರ್ ರವರ ಜಯಂತಿ ಅಂಗವಾಗಿ ಕಂಪ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಅಂಬೇಡ್ಕರ್ ರವರ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಭೀಮ್ ಆರ್ಮಿ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಂಪ್ಲಿಯ ಯುವಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಬ್ಯೀರೋ ರೀಪೋರ್ಟ್, ಸಿದ್ದಿ ಟಿವಿ, ಕಂಪ್ಲಿ