ಕಂಪ್ಲಿಯಲ್ಲಿ ಅದ್ಧೂರಿಯಾಗಿ ಜರುಗಿದ ಐತಿಹಾಸಿಕ ಸೋಮೇಶ್ವರ ರಥೋತ್ಸವ
ಕಂಪ್ಲಿ:ಏ.27.ತಾಲೂಕಿನ ಐತಿಹಾಸಿಕ ಸೋಮೇಶ್ವರ ರಥೋತ್ಸವ ಗುರುವಾರ ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿತು.
ಜಾತ್ರೆ ಅಂಗವಾಗಿ ಏರ್ಪಡಿಸಿದ್ದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಭಕಿಯನ್ನು ಸಮರ್ಪಿಸಿಕೊಂಡರು. ಜಾತ್ರೆ ನಿಮಿತ್ಯ ಮೆರವಣಿಗೆ ಸೇರಿ ನಾನಾ ಧಾರ್ಮಿಕ ಕಾರ್ಯಗಳು ಜರುಗಿತು.ಕಂಪ್ಲಿ ಐತಿಹಾಸಿಕ ಸೋಮೇಶ್ವರ ರಥೋತ್ಸವಕ್ಕೆ ಆಗಮಿಸಿದ್ದ ಭಕ್ತರು ರಥದ ಕಳಸಕ್ಕೆ ಬಾಳೆಹಣ್ಣು ಉತ್ತತ್ತಿ,ಹೂವು,ಪತ್ರಿ ಅರ್ಪಿಸಿ ತಮ್ಮ ಭಕ್ತಿಯನ್ನು ಸಮರ್ಪಿಸಿದರು.ಹಲವೆಡೆಗಳಿಂದ ಅನೇಕ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.
ವರದಿ : ಚನ್ನಕೇಶವ
Tags
ರಾಜ್ಯ