Kinnala : ಮತದಾನ ಜಾಗೃತಿಗೆ ಪಂಜಿನ ಮೆರವಣಿಗೆ

ಮತದಾನ ಜಾಗೃತಿಗೆ ಪಂಜಿನ ಮೆರವಣಿಗೆ

ಕಿನ್ನಾಳ ಗ್ರಾಮದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ವಿನೂತನ ಕಾರ್ಯಕ್ರಮ

 ಕೊಪ್ಪಳ : ಮೇ-10ರಂದು ವಿಧಾನಸಭಾ ಚುನಾವಣೆ ಜರುಗಲಿದ್ದು ಎಲ್ಲಾ ಮತದಾರರು ಕಡ್ಡಾಯ ಮತದಾನ ಮಾಡಬೇಕೆಂದು *ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಹಾಗು ಜಿ.ಪಂ ಸಿಇಒ ರಾಹುಲ್ ರತ್ನಂ ಪಾಂಡೆ* ಕರೆ ನೀಡಿದರು.

 ಕಿನ್ನಾಳ ಗ್ರಾಮದಲ್ಲಿ ಕಡ್ಡಾಯ ಮತದಾನ ಮತ್ತು ನೈತಿಕ ಮತದಾನಕ್ಕೆ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್‌ ಸಮಿತಿಯಿಂದ ಮಂಗಳವಾರ ಪಂಜಿನ ಮೆರವಣಿಗೆ ಚಾಲನೆ  ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ನಾನಾ ರೀತಿಯ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಮತದಾರರರ ಗಮನಸೆಳೆಯಲಾಗುತ್ತಿದೆ. ಮತದಾನ ನಮಗೆ ಸಂವಿಧಾನ ಕಲ್ಪಿಸಿರುವ ವಿಶೇಷ ಹಾಗೂ ಅಮೂಲ್ಯ ಹಕ್ಕಾಗಿದೆ. ಅದನ್ನು ವಿವೇಚನಾಯುಕ್ತವಾಗಿ ಅರ್ಹರಿಗೆ ಕಡ್ಡಾಯವಾಗಿ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕೆಂದು ಕರೆ ನೀಡಿದರು.18 ವರ್ಷ ತುಂಬಿದ ಪ್ರತಿಯೊಬ್ಬರೂ ಕಡ್ಡಾಯ ಮತ್ತು ನೈತಿಕ ಹಾಗೂ ವಿವೇಚನಾಯುಕ್ತವಾಗಿ ಮತಚಲಾಯಿಸಬೇಕು. ಕಡ್ಡಾಯ ಮತ್ತು ನೈತಿಕ ಮತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.

ಗ್ರಾಮ ಪಂಚಾಯತಿ ಆವರಣದಿಂದ  ಆರಂಭವಾದ ಪಂಜಿನ ಮೆರವಣಿಗೆ ಮುಖ್ಯ ರಸ್ತೆಯಲ್ಲಿ ಸಾಗಿ ಬಸ್ ನಿಲ್ದಾಣದವರೆಗೆ ಸ್ವತಃ ಸಿಇಒ, ಉಪವಿಭಾಗಾಧಿಕಾರಿ, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಗಳು ಜಾಗೃತಿ ಮೂಡಿಸಿದ್ದು ವಿಶೇಷವಾಗಿತ್ತು.

ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ -ಇದೇ ಸಂದರ್ಭದಲ್ಲಿ ಮಾನ್ಯರು ಕಡ್ಡಾಯ ಮತದಾನ ಮಾಡುವೆ ಎಂದು ಸಹಿ ಮಾಡುವ ಅಭಿಯಾನಕ್ಕೆ ಚಾಲನೆ ನೀಡಿದರು.

ಗಮನ ಸೆಳೆದ ವೋಟರ್ ಗ್ರಾಮ ಸಭೆಯಲ್ಲಿ ಎಲ್ಲರಿಗೂ ಮತದಾನ ಜಾಗೃತಿ ಮೂಡಿಸಲು ಗ್ರಾಮ ಪಂಚಾಯತಿಯಿಂದ ನಿರ್ಮಿಸಿದ ವೋಟರ್ ಗ್ರಾಮ ನಲ್ಲಿ ನಿಂತು ಪೊಟೊ ಕ್ಲಿಕಿಸಿ ಸಂಭ್ರಮಿಸಿದರು.

ಸದರಿ ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ, ಗಂಗಾವತಿ ವಿಧಾನಸಭಾ ಚುನಾವಣಾಧಿಕಾರಿ ಹಾಗು ಉಪವಿಭಾಗಾಧಿಕಾರಿ, ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರು, ಕ್ಷೇತ್ರ ಶಿಕ್ಷಣಾಧಿಕಾರಿ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರು, ತಾಲೂಕ ಯೋಜನಾಧಿಕಾರಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯತ ಪಿಡಿಒ, ತಾಲೂಕಿನ ಎಲ್ಲಾ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ತಾಲೂಕ ಸ್ವೀಪ್ ತಂಡದ ಸದಸ್ಯರು, ಕಾರ್ಯದರ್ಶಿಗಳು, ದ್ವೀತಿಯ ದರ್ಜೆ ಲೆಕ್ಕ ಸಹಾಯಕರು, ಕರವಸೂಲಿಗಾರರು, ಡಿಇಒಗಳು, ಶಾಲಾ-ಕಾಲೇಜುಗಳ ಉಪನ್ಯಾಸಕರು, ಶಿಕ್ಷಕರು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.

ವರದಿ : ಐಇಸಿ ಸಂಯೋಜಕರು,ಕೊಪ್ಪಳ

Previous Post Next Post

Contact Form

f="https://unpkg.com/video.js/dist/video-js.css" rel="stylesheet">