ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕೊಪ್ಪಳದ ಕಿಶೋರಿ ಬುದನೂರ್ ನೇಮಕ
ಕೊಪ್ಪಳ : ರಾಜ್ಯ ಪ್ರದೇಶ ಕಾಂಗ್ರೆಸ್ ಪಕ್ಷದ ಮಹಿಳಾ ಉಪಾಧ್ಯಕ್ಷರನ್ನಾಗಿ ಕೊಪ್ಪಳ ಜಿಲ್ಲೆಯ ಶ್ರೀಮತಿ ಕಿಶೋರಿ ಬುದನೂರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಶ್ರೀಮತಿ ಕಿಶೋರಿ ಬುದನೂರ್ ಅವರ ಪಕ್ಷ ಸಂಘಟನೆ, ಪಕ್ಷ ನಿಷ್ಠೆ ಗುರುತಿಸಿ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಬಿ ಪುಷ್ಪ ಅಮರ್ ನಾಥ್ ಅವರು ಶ್ರೀಮತಿ ಕಿಶೋರಿ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಸಮಾಜ ಸೇವಕರಾಗಿ,ಮಹಿಳಾ ಉದ್ಯಮಿಯಾಗಿ ಗುರುತಿಸಿಕೊಂಡಿರುವ ಶ್ರೀಮತಿ ಕಿಶೋರಿ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರು, ಸಂಘಟಕರಾಗಿ ಕೆಲಸ ಮಾಡುತ್ತಿದ್ದಾರೆ.
ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ ವಾಗಿದ್ದಕ್ಕೆ ಕಾಂಗ್ರೆಸ್ ಪಕ್ಷದ ಕೊಪ್ಪಳ ಜಿಲ್ಲಾ ನಾಯಕರು ಹರ್ಷ ವ್ಯಕ್ತಪಡಿಸಿದ್ದಾರೆ.
ವರದಿ : ಈರಯ್ಯ ಕುರ್ತಕೋಟಿ