Koppal : ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ರಾಘವೇಂದ್ರ ಹಿಟ್ನಾಳ ನಾಮಪತ್ರ ಸಲ್ಲಿಕೆ

ಕೊಪ್ಪಳ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ರಾಘವೇಂದ್ರ ಹಿಟ್ನಾಳ ನಾಮಪತ್ರ ಸಲ್ಲಿಕೆ

ಕೊಪ್ಪಳ,:  ಹಾಲಿ ಶಾಸಕ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಕೆ.ರಾಘವೇಂದ್ರ ಹಿಟ್ನಾಳ ತಮ್ಮ ನಾಮಪತ್ರವನ್ನು ಸೋಮವಾರ ನಗರದ 
ತಹಶೀಲ್ದಾರ ಕಾರ್ಯಲಯದಲ್ಲಿ ಚುನಾವಣಾಧಿಕಾರಿ ಅವರಿಗೆ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ಮುನ್ನ ಬೆಳಿಗ್ಗೆ
ನಗರದ ಶ್ರೀಗವಿಮಠ ಭೇಟಿ ನೀಡಿ ಗವಿಶ್ರೀಗಳವರ ಆಶೀರ್ವಾದ ಪಡೆದು, ನಂತರ ಪಲ್ಟಾನ್ ಓಣಿಯ ದರ್ಗಾಕ್ಕೆ ಭೇಟಿ ನೀಡಿ, ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ನಂತರ ನಗರದ ಸಿರಸಪ್ಪಯ್ಯನ ಮಠದಿಂದ ಗಡಿಯಾರ ಕಂಬ, ಜವಾಹರ ರಸ್ತೆ, ಅಶೋಕ ವೃತ್ತ ಮಾರ್ಗವಾಗಿ ತಹಶೀಲ್ದಾರರ ಕಚೇರಿ ವೃತ್ತದವರೆಗೆ ಭವ್ಯ ಮೆರವಣಿಗೆ ಮುಖಾಂತರ ಆಗಮಿಸಿ ತಹಶೀಲ್ದಾರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ನಂತರ ಅವರು ಮಾತನಾಡಿ, ಈ ಭಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದ ಅವರು ನನ್ನನ್ನು ಕೊಪ್ಪಳ ಕ್ಷೇತ್ರದ ಜನರು ಎರಡು ಬಾರಿ ಶಾಸಕನ್ನಾಗಿ ಮಾಡಿದ್ದಾರೆ. ಈ ಬಾರಿ ಸಹ ಜನರು ಕಾಂಗ್ರೆಸ್ ಪಕ್ಷಕ್ಜೆ ಬೆಂಬಲ ನೀಡುತ್ತಾರೆ ಎಂದರು.
ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯ
ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು.

ವರದಿ : ಶಿವಕುಮಾರ ಹಿರೇಮಠ
Previous Post Next Post

Contact Form

f="https://unpkg.com/video.js/dist/video-js.css" rel="stylesheet">