Koppal : ವಿಧಾನಸಭಾ ಚುನಾವಣೆ: ಬೈಕ್ ರ‍್ಯಾಲಿ ಮೂಲಕ ಮತದಾನ ಜಾಗೃತಿ


ವಿಧಾನಸಭಾ ಚುನಾವಣೆ: ಬೈಕ್ ರ‍್ಯಾಲಿ ಮೂಲಕ ಮತದಾನ ಜಾಗೃತಿ

 ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮತದಾರಿಗೆ ಮತದಾನದ ಜಾಗೃತಿಗಾಗಿ ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಏಪ್ರಿಲ್ 11ರಂದು ಕೊಪ್ಪಳ ನಗರದಲ್ಲಿ ಬೃಹತ್ ಬೈಕ್ ರ‍್ಯಾಲಿ ನಡೆಯಿತು.

ಬೈಕ್ ರ‍್ಯಾಲಿಗೆ ನಗರದ ಶ್ರೀ ಗವಿಸಿದ್ದೇಶ್ವರ ಮಠದ ಮೈದಾನದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಮತ್ತು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಬೈಕ್ ಸವಾರಿ ಮಾಡುವ ಮೂಲಕ ಚಾಲನೆ ನೀಡಿದರು.


ವಿಶೇಷ ಪ್ರಚಾರ ವಾಹಿನಿ :  ಜಿಲ್ಲಾ ಸ್ವೀಪ್ ಸಮಿತಿಯ ವಿಶೇಷ ಪ್ರಚಾರ ವಾಹಿನಿಗೆ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಸಿಇಓ ಅವರು ಚಾಲನೆ ನೀಡಿದರು. ಈ ವಾಹಿನಿಯಲ್ಲಿ ನೈತಿಕ ಹಾಗೂ ಕಡ್ಡಾಯ ಮತದಾನದ ಬಗ್ಗೆ ಅರಿವು ಮೂಡಿಸುವ ಫಲಕಗಳನ್ನು ಅಳವಡಿಸಲಾಗಿದೆ. ಅಲ್ಲದೇ ಮತದಾನ ಜಾಗೃತ ಗೀತೆಗಳ ಮೂಲಕ ಅರಿವು ಮೂಡಿಸುವುದು ವಿಶೇಷವಾಗಿತ್ತು.  

ಪ್ರತಿಜ್ಞಾವಿಧಿ ಸ್ವೀಕಾರ : ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ಎಲ್ಲರೂ ಕಡ್ಡಾವಾಗಿ ಮತದಾನ ಮಾಡುವ ಕುರಿತಾದ ಮತದಾನ ಪ್ರತಿಜ್ಞಾವಿಧಿಯನ್ನು ಕಾರ್ಯಕ್ರಮದಲ್ಲಿ ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಟಿ.ಕೃಷ್ಣಮೂರ್ತಿ, ಕೊಪ್ಪಳ ವಿಧಾನಸಭಾ ಚುನಾವಣಾಧಿಕಾರಿಗಳಾದ ಮಲ್ಲಿಕಾರ್ಜುನ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮಣ್ಣವರ್, ಕೊಪ್ಪಳ ತಹಶೀಲ್ದಾರ ಅಮರೇಶ ಬಿರಾದಾರ್, ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರಾದ ಡಾ ಡಿ.ಮೋಹನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬೃಹತ್ ಸರಪಳಿ ನಿರ್ಮಾಣ : ವಿಧಾನಸಭಾ ಚುನಾವಣೆಯ ಪ್ರಯುಕ್ತ ಮತದಾನ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮೀತಿಯ ಹಲವು ಬಗೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಶ್ರೀ ಗವಿಮಠದ ಮೈದಾನದಲ್ಲಿ ದ್ವಿಚಕ್ರ ವಾಹನಗಳೊಂದಿಗೆ ಅಧಿಕಾರಿಗಳು, ಸಿಬ್ಬಂದಿಯನ್ನೊಳಗೊಂಡ ಒಂದು ಬೃಹತ್ ವೃತ್ತ ನಿರ್ಮಾಣ ಅದರೊಳಗೆ ಪದವಿ ಮತ್ತು ಬಿಎಡ್ ಕಾಲೇಜು ವಿದ್ಯಾರ್ಥಿಗಳನ್ನೊಳಗೊಂಡು ಸ್ವೀಪ್ ಕೊಪ್ಪಳ, ``ಮೈ ವೋಟ್ ಮೈ ರೈಟ್'' ಎಂಬ ಘೋಷ ವಾಕ್ಯವನ್ನು ರಚಿಸುವ ಮೂಲಕ ವಿಶೇಷ ಕಾರ್ಯಕ್ರಮಕ್ಕೆ ಜಿಲ್ಲಾ ಸ್ವೀಪ್ ಸಮಿತಿಯು ಸೈ ಎಂದಿದೆ.

ನಗರದ ವಿವಿಧೆಡೆ ರ‍್ಯಾಲಿ : ರ‍್ಯಾಲಿಯು ಶ್ರೀ ಗವಿಸಿದ್ದೇಶ್ವರ ಮಠದ ಮೈದಾನದಿಂದ ಆರಂಭಗೊಂಡು ಬಸವೇಶ್ವರ ವೃತ್ತ (ಗಂಜ್ ಸರ್ಕಲ್), ಹಳೆಯ ಡಿಸಿ ಆಫೀಸ್, ಸಾಲಾರ್ ಜಂಗ್ ರಸ್ತೆ, ಗಡಿಯಾರ ಕಂಬ, ಜವಾಹರ ರಸ್ತೆ, ಅಶೋಕ ವೃತ್ತ, ಬಸ್‌ನಿಲ್ದಾಣ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಯಿತು. ರ‍್ಯಾಲಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಶಿಕ್ಷಕರು ಭಾಗವಹಿಸಿ ಜಾಗೃತಿ ಫಲಕಗಳನ್ನು ಹಿಡಿದು ಮತದಾರರಿಗೆ ಅರಿವು ಮೂಡಿಸಿದರು.

Previous Post Next Post

Contact Form

f="https://unpkg.com/video.js/dist/video-js.css" rel="stylesheet">