ಕುಕನೂರು ಪಟ್ಟಣದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ-ಬೃಹತ್ ಪ್ರತಿಮೆ ನಿರ್ಮಾಣಕ್ಕೆ ನಿರ್ಧಾರ
ಕುಕನೂರು : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು.
ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಪಕ್ಷದ ಮುಖಂಡರು, ನಾಗರಿಕರು, ದಲಿತ ಮುಖಂಡರು ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಹಾನ್ ಚೇತನರಿಗೆ ಗೌರವ ಸಲ್ಲಿಸುವ ಮೂಲಕ ಜಯಂತಿ ಆಚರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡ, ವಾಲ್ಮೀಕಿ ಸಂಘದ ಜಿಲ್ಲಾ ಅಧ್ಯಕ್ಷ ರತ್ನಾಕರ್ ತಳವಾರ್ ಅವರು, ಕುಕನೂರು ಪಟ್ಟಣದಲ್ಲಿ ಅಂಬೇಡ್ಕರ್ ಅವರ ಬ್ರಹತ್ ಪ್ರತಿಮೆ ನಿರ್ಮಿಸಬೇಕೆಂಬುದು ಬಹು ದಿನದ ಕನಸು, ಬೇಡಿಕೆಯಾಗಿದೆ, ಎಲ್ಲಾ ಪಕ್ಷದ ಮುಖಂಡರು, ಎಲ್ಲಾ ಸಮಾಜದ ಮುಖಂಡರು ಸೇರಿ ಕುಕನೂರು ಪಟ್ಟಣದಲ್ಲಿ ಬ್ರಹತ್ ಪ್ರತಿಮೆ ನಿರ್ಮಾಣ ಮಾಡೋಣ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಕಾರ್ಯಕ್ಕೆ ವಯಕ್ತಿಕವಾಗಿ 51 ಸಾವಿರ ರೂ ದೇಣಿಗೆಯಾಗಿ ನೀಡಿದರು. ಇದೆ ಸಂದರ್ಭದಲ್ಲಿ ಇತರರು ಕೂಡಾ ಪೂರ್ತಿ ನಿರ್ಮಾಣ ಕಾರ್ಯಕ್ಕೆ ದೇಣಿಗೆ ಘೋಷಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯ ಎಂ ಎಲ್ ಸಿ ಹೇಮಲತಾ ನಾಯಕ್, ಅನಿಲ್ ಆಚಾರ್, ರಾಮಣ್ಣ ಬಜೇಂತ್ರಿ, ಯಮನೂರಪ್ಪ ವೀರಾಪುರ,ರಾಮಣ್ಣ ಬಂಕದಮನಿ, ಲಕ್ಷ್ಮಣ್ ಕಾಳಿ ಸೇರಿದಂತೆ ದಲಿತ ಸಂಘಟನೆ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.
ವರದಿ : ಈರಯ್ಯ ಕುರ್ತಕೋಟಿ