Madikeri : ಮದ್ಯ ಮಾರಾಟ ನಿಷೇಧ


ಮದ್ಯ ಮಾರಾಟ ನಿಷೇಧ

*********************************

ಮಡಿಕೇರಿ ಏ.20(ಕರ್ನಾಟಕ ವಾರ್ತೆ):-ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಮತದಾನ ಹಾಗೂ ಮತ ಎಣಿಕೆ ಕಾರ್ಯವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967 ರ ನಿಯಮ 10-ಬಿ ಅಡಿಯಲ್ಲಿ ಪ್ರತ್ಯಾಯೋಜಿತವಾಗಿರುವ ಅಧಿಕಾರದಂತೆ ಮೇ, 08 ರ ಸಂಜೆ 6 ರಿಂದ ಮೇ, 10 ರ ಮಧ್ಯರಾತ್ರಿ 12 ಗಂಟೆಯವರೆಗೆ ಮತ್ತು ಮೇ, 12 ರ ಮಧ್ಯರಾತ್ರಿ 12 ರಿಂದ ಮೇ, 13 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಸ್ಟಾರ್ ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ.


Previous Post Next Post

Contact Form

f="https://unpkg.com/video.js/dist/video-js.css" rel="stylesheet">