ತುರವಿಹಾಳ ಪಟ್ಟಣ ಪಂಚಾಯತ್ ವತಿಯಿಂದ ಸಾರ್ವಜನಿಕರಿಗೆ ಪ್ರತಿಜ್ಞೆ ವಿಧಿ ಬೋಧನೆ
ಸಿಂಧನೂರು ತಾಲ್ಲೂಕಿನ ತುರ್ವಿಹಾಳ ಪಟ್ಟಣದಲ್ಲಿ ಚುನಾವಣಾ ಆಯೋಗ, ಜಿಲ್ಲಾಡಳಿತ,ಪಟ್ಟಣ ಪಂಚಾಯಿತಿ ಮತ್ತು ಸ್ವೀಪ್ ಸಮಿತಿ ವತಿಯಿಂದ ಶುಕ್ರವಾರ ಮತದಾನ ಜಾಗೃತಿ ಅಭಿಯಾನಕ್ಕೆ ಪ್ರಸನ್ನ ಎ ಕಲ್ಯಾಣ ಶೆಟ್ಟಿ ಮುಖ್ಯಾಧಿಕಾರಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು ಅವರು ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೇ ಆದ ಮೌಲ್ಯವಿದ್ದು 18 ವರ್ಷ ದಾಟಿದ ಎಲ್ಲರೂ ತಪ್ಪದೆ ಮತದಾನ ಮಾಡಿ’ ಎಂದು ಹೇಳಿದರು.
ಹಾಗೂ ಮತದಾರರನ್ನು ಉದ್ದೇಶಿಸಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಐ ಎಸ್ ಆರ ಎ ತಂಡದ ಸಮುದಾಯ ಸಂಘಟಕರಾದ ಶಾಂತಮುತ್ತಯ್ಯ ಗುರುವಿನ ಅವರು ಪ್ರತಿಜ್ಞಾ ವಿಧಿ ಬೋಧಿಸಿ ನಂತರ ಮಾತನಾಡಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಮತದಾನವನ್ನು ಮಾಡಲೇಬೇಕು ಮತ್ತು ಮತದಾನವೆಂಬುದು
ಸಾಮಾಜಿಕ ಹಕ್ಕು ಮತ್ತು ಜವಾಬ್ದಾರಿ ಕೂಡಆಗಿದೆ.
ಮತದಾನ ಜಾಗೃತಿ ಜಾತ ಪಟ್ಟಣ ಪಂಚಾಯಿತಿ ಯಿಂದ ಪ್ರಾರಂಭ ಗೊಂಡು ಪ್ರಮುಖ ಬೀದಿಗಳ ಮುಖಾಂತರ ಬಸ್ ನಿಲ್ದಾಣ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಮತದಾನದ ಜಾಗೃತಿ ಕುರಿತು ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ, ಸಿ,ಆರ್,ಸಿ.ಹಾಗೂ ಸಿ ಆರ್ ಪಿ ಗಳು, ಮುಖ್ಯ ಗುರುಗಳು,ಸಹ ಶಿಕ್ಷಕರು,ಬಿ ಎಲ್ ಓ ಗಳು ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಮೋನಮ್ಮ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾಹಯಕಿಯರು ಮತ್ತು ಆಶಾ ಕಾರ್ಯಕರ್ತೆಯರು, ವಿಕಲಚೇನರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಭಾಗವಹಿಸಿದ್ದರು.
ವರದಿ : ಮೆಹಬೂಬ್ ಮೊಮಿನ್
Tags
ರಾಜ್ಯ