ತಿ.ನರಸೀಪುರ : ಭೀಕರ ಅಪಘಾತದಲ್ಲಿ ಮಗು ಸೇರಿ ಹತ್ತು ಮಂದಿ ದಾರುಣ ಸಾವು
ಕೊಳ್ಳೇಗಾಲ ಮತ್ತು ತಿ.ನರಸೀಪುರ ಮುಖ್ಯ ರಸ್ತೆಯಲ್ಲಿನ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಭೀಕರ ಅಪಘಾತ ಸಂಭವಿಸಿ ಹತ್ತು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ. ಸೋಮವಾರ ಮಧ್ಯಾಹ್ನ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿಕ ಇನೋವಾ ಕಾರು ಖಾಸಗಿ ಬಸ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.
ಅಪಘಾತದ ಭೀಕರತೆಗೆ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದವರು ಕೂಡ ಆಸ್ಪತ್ರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮೂರು ಮಕ್ಕಳು ಸೇರಿದಂತೆ ಹತ್ತುಮಂದಿ ಸಾವನ್ನಪ್ಪಿದ್ದಾರೆ.
ಸೋಮವಾರ ಮಧ್ಯಾಹ್ನ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿಕ ಇನೋವಾ ಕಾರು ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ. ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಹತ್ತುಮಂದಿ ಸಾವನ್ನಪ್ಪಿದ್ದಾರೆ.
ಮೃತ ಹತ್ತು ಜನರು ಬಳ್ಳಾರಿ ಮೂಲದವರೆಂದು ತಿಳಿದು ಬಂದಿದೆ. ಟಿ.ನರಸೀಪುರ ಮುಖ್ಯ ರಸ್ತೆಯ ಮಾರ್ಗವಾಗಿ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ತಿ.ನರಸೀಪುರ ಪೊಲೀಸರು ಆಗಮಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಿನಲ್ಲಿ ಮೂವರು ಮಕ್ಕಳು ಹಾಗೂ ಮಹಿಳೆಯರು ಸೇರಿ 13 ಮಂದಿ ಇದ್ದರು ಎನ್ನಲಾಗಿದೆ. ಖಾಸಗಿ ಬಸ್ ಕೊಳ್ಳೇಗಾಲದ ಕಡೆಗೆ ಹೋಗುತ್ತಿತ್ತು. ಮೃತರ ವಿವರ ಲಭ್ಯವಾಗಿಲ್ಲ. ಸ್ಥಳೀಯರ ನೆರವಿನಲ್ಲಿ ಶವಗಳನ್ನು ಹೊರ ತೆಗೆದು ಮೈಸೂರು ಮೆಡಿಕಲ್ ಕಾಲೇಜಿಗೆ ರವಾನಿಸಲಾಯಿತು.