HATRICK ಹ್ಯಾಟ್ರಿಕ್ ಗೆಲುವು ಸಾಧಿಸಿದ ಕೆ.ರಾಘವೇಂದ್ರ ಹಿಟ್ನಾಳ


HATRICK ಹ್ಯಾಟ್ರಿಕ್ ಗೆಲುವು ಸಾಧಿಸಿದ ಕೆ.ರಾಘವೇಂದ್ರ ಹಿಟ್ನಾಳ

ಕೊಪ್ಪಳ,: ವಿಧಾನಸಭಾ ಕೊಪ್ಪಳ ಕ್ಷೇತ್ರದಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಕೆ.ರಾಘವೇಂದ್ರ ಹಿಟ್ನಾಳ ಹ್ಯಾಟ್ರಿಕ್ ಗೆಲುವನ್ನು ದಾಖಲಿಸಿದ್ದಾರೆ. ಇದೀಗ ನಿರಂತರವಾಗಿ ಮೂರನೇ ಬಾರಿಗೆ ಕೆ.ರಾಘವೇಂದ್ರ ಹಿಟ್ನಾಳ ಅವರು ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.

ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಮತ ಎಣಿಕೆಯ ಎಲ್ಲಾ ಸುತ್ತುಗಳು ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ.ರಾಘವೇಂದ್ರ ಹಿಟ್ನಾಳ ಅವರು 36260ಮತಗಳಿಂದ ಗೆಲುವು ಸಾಧಿಸಿದ್ದಾರೆ. 

ಬಿಜೆಪಿ ಪಕ್ಷದ ಅಭ್ಯರ್ಥಿ ಮಂಜುಳಾ ಕರಡಿ 54170 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದಿದ್ದಾರೆ. ಮೂರನೆಯ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿ ಸಿವಿ ಚಂದ್ರಶೇಖರ  45369 ಮತಗಳನ್ನು ಪಡೆದಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ರಾಘವೇಂದ್ರ ಹಿಟ್ನಾಳ 90430 ಮತಗಳನ್ನು ಪಡೆದು ಸತತವಾಗಿ ಮೂರನೇ ಬಾರಿಗೆ ಗೆಲುವು ಸಾಧಿಸಿ ಹ್ಯಾಟ್ರಿಕ್ ವಿಜಯಪತಾಕೆ ಹಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ರಾಘವೇಂದ್ರ ಹಿಟ್ನಾಳ ಅವರ ಹ್ಯಾಟ್ರಿಕ್ ಗೆಲುವಿನ ಸುದ್ದಿ ತಿಳಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಗೆಲುವಿನ ಸಂಭ್ರಮ ಆಚರಿಸಿದರು.

Previous Post Next Post

Contact Form

f="https://unpkg.com/video.js/dist/video-js.css" rel="stylesheet">