ಸಿದ್ದರಾಮಯ್ಯ ಸಿಎಂ ಆಗಲು ಡಿಕೆಶಿ ಒಪ್ಪಿಗೆ: ಶಿಮ್ಲಾದಿಂದ ಕರೆ ಮಾಡಿ ರಾಜಿ ಸೂತ್ರಕ್ಕೆ ಒಪ್ಪಿಸಿದ ಸೋನಿಯಾ ಗಾಂಧಿ

ನವದೆಹಲಿ: ರಾಜ್ಯದ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟು ಕೊನೆಗೂ ಅಂತ್ಯಗೊಂಡಿದೆ. ಕಾಂಗ್ರೆಸ್ ಪರಮೋಚ್ಚ ನಾಯಕಿ ಸೋನಿಯಾ ಗಾಂಧಿ ಅವರ ಮಧ್ಯಪ್ರವೇಶದಿಂದ ಬಿಕ್ಕಟ್ಟು ಶಮನಗೊಂಡಿದೆ. ಸಿದ್ದರಾಮಯ್ಯ ಅವರು ಮುಖ್ಯ ಮಂತ್ರಿಯಾಗಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗ್ರೀನ್ ಸಿಗ್ನಲ್ ತೋರಿಸಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.
ಮುಖ್ಯಮಂತ್ರಿ ಹುದ್ದೆಗೆ ಕಳೆದ 4 ದಿನಗಳಿಂದ ಪಟ್ಟು ಹಿಡಿದಿರುವ ಶಿವಕುಮಾರ್ ಜತೆ ಸೋನಿಯಾ ಗಾಂಧಿ ಅವರು ದೂರವಾಣಿ ಮೂಲಕ ಮಾತನಾಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಿಮಾಚಲ ಪ್ರದೇಶದಲ್ಲಿರುವ ಸೋನಿಯಾ ಅವರು ದೂರವಾಣಿ ಮೂಲಕ ಶಿವಕುಮಾರ್ ಜತೆ ಮಾತುಕತೆ ನಡೆಸಿದ್ದಾರೆ. ಮೊದಲ ಅರ್ಧ ಅವಧಿ ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲು ಒಪ್ಪಿಕೊಂಡಿದ್ದಾರೆ. ಲೋಕಸಭೆ ಚುನಾವಣೆ ಮುಗಿಯುವವರೆಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯುವಂತೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.