ಜ್ಞಾನ ಬಂಧು ಶಾಲೆ : ಸಿ.ಬಿ.ಎಸ್.ಇ. ಹತ್ತನೆ ತರಗತಿಯಲ್ಲಿ ಉತ್ತಮ ಫಲಿತಾಂಶ
ಕೊಪ್ಪಳ,: ತಾಲೂಕಿನ ಭಾಗ್ಯನಗರ ಪಟ್ಟಣದ ಜ್ಞಾನಬಂಧು ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು 2022-23 ನೇ ಸಾಲಿನ ಸಿ.ಬಿ.ಎಸ್.ಇ. ಹತ್ತನೆ ತರಗತಿ ಪರೀಕ್ಷೆಯಲ್ಲಿ ಒಟ್ಟು 55 ವಿದ್ಯಾರ್ಥಿಗಳು ಹಾಜರಾಗಿದ್ದರು, ಶಾಲೆಯು ಶೇ 98.18% ರಷ್ಟು ಫಲಿತಾಂಶ ಪಡೆಯುವುದರ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಸಂಜನಾ ಯು.ಜೆ 88.6%, ಪ್ರಣವಕುಮಾರ 84% ಹಾಗೂ ಪಲ್ಲವಿ ಬಳಗಾನೂರ 81.4% ಫಲಿತಾಂಶ ಪಡೆಯುವುದರ ಮೂಲಕ ವಿದ್ಯಾರ್ಥಿಗಳು ಶಾಲೆಗೆ, ಶಿಕ್ಷಕರಿಗೆ ಹಾಗೂ ಪಾಲಕರಿಗೆ ಕೀರ್ತಿಯನ್ನು ತಂದಿದ್ದಾರೆ. ಅತ್ಯುತ್ತಮ ಅಂಕಗಳಿಕೆಯ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳನ್ನು ಹಾಗೂ ಉತ್ತಮ ಫಲಿತಾಂಶ ಪಡೆಯುವಲ್ಲಿ ಶ್ರಮಿಸಿದ ಶಾಲಾ ಶಿಕ್ಷಕರನ್ನು ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರಾದ ಮಂಜುನಾಥ ಜಕ್ಕಲಿ ಅವರು ಅಭಿನಂದಿಸಿದ್ದಾರೆ.