ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಿಸಲು ಸೂಚನೆ:ಜಿ.ಪಂ ಸಿಇಒ ರಾಹುಲ್ ರತ್ನಂ ಪಾಂಡೆಯ
ಕಲ್ಲತಾವರಗೇರಾ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳ ಪರಿಶೀಲನೆ
ಕೊಪ್ಪಳ:-ಸ್ವಚ್ಛ ಭಾರತ್ ಮಿಷನ್ (ಗ್ರಾ), ಯೋಜನೆಯಡಿಯಲ್ಲಿ ಲೈಟ್ ಹೌಸ್ ಇನ್ಸೇಟಿವ್ ಗೆ ಸಂಬಂಧಿಸಿದಂತೆ ಕಲ್ಲತಾವರಗೇರಾ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಘನ ತ್ಯಾಜ್ಯ ವಿಲೇವಾರಿ ಘಟಕ, ಬೂದು ನೀರು ನಿರ್ವಹಣೆ ಇತರೆ ವಿಷಯಗಳ ಕುರಿತು ಸಭೆ ನಡೆಸಿದರು,
ದಿನಾಂಕ:19-5-2023ರಂದು ಕೊಪ್ಪಳ ತಾಲೂಕಿನ ಕಲ್ಲತಾವರಗೇರಾ ಗ್ರಾಮ ಪಂಚಾಯತಿಯಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ, ಅಮೃತ ಸರೋವರ ಕೆರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಮಾನ್ಯರು ಅಬ್ಬಿಗೇರಿ ಗ್ರಾಮದಲ್ಲಿ ಬೂದು ನೀರು ನಿರ್ವಹಣಾ ಕಾಮಗಾರಿ, ದನಕನದೊಡ್ಡಿ ಗ್ರಾಮದಲ್ಲಿ ಅಮೃತ ಸರೋವರ ಕೆರೆ, ಜೆಜೆಎಂ ಕಾಮಗಾರಿ ಹಾಗು ಕೂಕನಪಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು.
ತಾಲೂಕ ಪಂಚಾಯತ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಎಸ್ ಬಿಎಂ (ಗ್ರಾ) ನೋಡಲ್ ಅಧಿಕಾರಿಗಳು, ಜಿಲ್ಲಾ ಸಮಾಲೋಚಕರು, ಪಿಡಿಒ, ಗ್ರಾಮ ಪಂಚಾಯತ ಅಧ್ಯರು, ಉಪಾಧ್ಯಕ್ಷರು, ತಾಂತ್ರಿಕ ಸಹಾಯಕರು ಹಾಜರಿದ್ದರು.