ಗವಿಶ್ರೀಗವರ ಆಶೀರ್ವಾದ ಪಡೆದ ಶಾಸಕ ಹಿಟ್ನಾಳ
ಕೊಪ್ಪಳ,: ಸತತವಾಗಿ ಮೂರು ಬಾರಿ ಕೊಪ್ಪಳ ವಿಧಾನಸಭೆ ಕ್ಷೇತ್ರದ
ಶಾಸಕರಾಗಿ ಆಯ್ಕೆಯಾಗಿರುವ ಕೆ.ರಾಘವೇಂದ್ರ ಹಿಟ್ನಾಳ ಅವರು ಸೋಮವಾರ ಶ್ರೀಗವಿಮಠಕ್ಕೆ ಭೇಟಿ ನೀಡಿ ಶ್ರೀಗವಿಸಿದ್ದೇಶ್ವರ ಮಹಾಸ್ವಾಮೀಜಿಗಳವರ ಆಶೀರ್ವಾದ ಪಡೆದರು. ನಂತರ ಕೊಪ್ಪಳ ಕ್ಷೇತ್ರದಲ್ಲಿನ ನೀರಾವರಿ ಯೋಜನೆಗಳ ಕುರಿತು ಸುಧೀರ್ಘ ಕಾಲ ಚರ್ಚೆ ನಡೆಸಲಾಯಿತು. ನಂತರ ಮಾತನಾಡಿದ ಶಾಸಕರು, ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸಿ ನುಡಿದಂತೆ ನಡೆಯುತ್ತೇವೆ. ಈಗಾಗಲೇ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮೊದಲ ಕ್ಯಾಬಿನೆಟ್ ಸಭೆಯಲ್ಲಿಯೇ ಈ ಐದು ಗ್ಯಾರಂಟಿಗಳಿಗೆ ಅನುಮೋದನೆಯನ್ನ ನೀಡಿ ಆದೇಶ ಹೊರಡಿಸಿದ್ದಾರೆ. ಸೋಲಿನ ಹತಾಶೆಯಲ್ಲಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರುಗಳು ಈ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುತ್ತಿರುದು ಹಾಸ್ಯಸ್ಪದ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಸ್.ಬಿ.ನಾಗರಳ್ಳಿ,ಗಿರೀಶ್ ಹಿರೇಮಠ, ಪ್ರಸನ್ನ ಗಡಾದ, ಶಿವಕುಮಾರ್ ಶೆಟ್ಟರ್, ಅಕ್ಬರ್ ಪಾಷಾ ಪಲ್ಟನ್ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.