BJP : ಉದಾಸಿ ವಿದಾಯ : ಬಿಜೆಪಿಗೆ ಬಿಗ್ ಶಾಕ್


ಉದಾಸಿ ವಿದಾಯ : ಬಿಜೆಪಿಗೆ ಬಿಗ್ ಶಾಕ್

ಲೋಕಸಭೆ ಚುನಾವಣೆಗೂ ಮುನ್ನವೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಶಿವಕುಮಾರ ಉದಾಸಿ ಅವರು ಚುನಾವಣಾ ರಾಜಕೀಯಕ್ಕೆ ವಿದಾಯ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ಶಿವಕುಮಾರ್ ಉದಾಸಿ, 2024ರ ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ಈಗಾಗಲೇ ಪಕ್ಷದ ನಾಯಕರಿಗೆ ತಿಳಿಸಿದ್ದೇನೆ. ವೈಯಕ್ತಿಕ ಕಾರಣದಿಂದ ರಾಜಕೀಯದಿಂದ ದೂರ ಉಳಿಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಇಷ್ಟು ವರ್ಷ ನಮ್ಮ ಉದ್ಯಮ ಸಂಸ್ಥೆಯ ವ್ಯಾವಹಾರಿಕ ಪಾಲುದಾರರು ಎಲ್ಲವನ್ನೂ ನೋಡಿಕೊಳ್ಳುತ್ತಿದ್ದರು. ಇದರಿಂದ ನನಗೆ ಅನುಕೂಲವಾಗಿತ್ತು. ಆದರೆ ಇತ್ತೀಚೆಗೆ ನಮ್ಮ ಪಾಲುದಾರ ಅನಾರೋಗ್ಯಕ್ಕೀಡಾಗಿದ್ದಾರೆ. ಸಂಸ್ಥೆಯಲ್ಲಿ ಸುಮಾರು 250 ಮಂದಿ ಉದ್ಯೋಗಿಗಳಿದ್ದಾರೆ. ಹೀಗಾಗಿ ನಾನೇ ಸಂಪೂರ್ಣ ವ್ಯವಹಾರದ ಜವಾಬ್ದಾರಿ ನೋಡಿಕೊಳ್ಳಬೇಕಾಗಿರುವುದರಿಂದ ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

2009, 2014 ಮತ್ತು 2019ರ ಮೂರು ಲೋಕಸಭಾ ಚುನಾವಣೆಗಳಲ್ಲೂ ಶಿವಕುಮಾರ ಉದಾಸಿ ಅವರು ಬಿಜೆಪಿಯಿಂದ ಸ್ಪರ್ಧಿಸಿ, ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದರು. ಆದರೆ ಇದೀಗ ಏಕಾಏಕಿ ರಾಜಕೀಯಕ್ಕೆ ವಿದಾಯ ಘೋಷಿಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

Previous Post Next Post

AD

 


Siddi TV

Contact Form

f="https://unpkg.com/video.js/dist/video-js.css" rel="stylesheet">