Bengaluru : ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ ಘೋಷಿಸಿದ ಸ್ಪೀಕರ್ ಯು. ಟಿ. ಖಾದರ್


ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ ಘೋಷಿಸಿದ ಸ್ಪೀಕರ್ ಯು. ಟಿ. ಖಾದರ್

***************************** 

ಬೆಂಗಳೂರು: ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ ಘೋಷಣೆ ಮಾಡಲಾಗುವುದು ಎಂದು ಶಾಸಕರಿಗೆ ಸ್ಪೀಕರ್ ಯು ಟಿ ಖಾದರ್ ಘೋಷಣೆ ಮಾಡಿದ್ದಾರೆ.

ನಿಗದಿತ ಸಮಯಕ್ಕೆ ಸದನಕ್ಕೆ ಆಗಮಿಸಿದ್ದ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಕೌಜಲಗಿ ಮಹಾಂತೇಶ್, ಎಸ್ ಸುರೇಶ್ ಕುಮಾರ್, ಪ್ರದೀಪ್ ಈಶ್ವರ್, ಎಸ್ ಆರ್ ಶ್ರೀನಿವಾಸ್, ಲತಾ ಮಲ್ಲಿಕಾರ್ಜುನ, ಶಿವಲಿಂಗೇಗೌಡ ಸೇರಿದಂತೆ ಇತರ ಶಾಸಕರ ಹೆಸರು ಓದಿದ ಸ್ಪೀಕರ್ ಶಾಸಕರ ಬಗ್ಗೆ ಮೆಚ್ಚುಗೆ ಸೂಚಿಸಿದರು.

ನಿಗದಿತ ಸಮಯಕ್ಕೆ ಸದನಕ್ಕೆ ಆಗಮಿಸಿದ ಶಾಸಕರಿಗೆ ಬಹುಮಾನ ಕೊಟ್ಟರೆ ತಪ್ಪು ಸಂದೇಶ ಹೋಗುತ್ತದೆ ಎಂದು ಸ್ಪೀಕರ್ ಖಾದರ್ ಅವರಿಗೆ ಶಾಸಕರೊಬ್ಬರು ಸಲಹೆ ಕೊಟ್ಟರು. ಬಹುಮಾನ ಘೋಷಣೆ ಬದಲಾಗಿ ಸರ್ಟಿಫಿಕೇಟ್ ಕೊಡಲು ಮನವಿ ಮಾಡಿದರು. ಬಹುಮಾನ ಎಂದರೆ ತಪ್ಪು ಸಂದೇಶ ಹೋಗುತ್ತದೆ. ಬದಲಾಗಿ ಪ್ರಮಾಣ ಪತ್ರ ನೀಡಿ ಎಂದು ಮನವಿ ಮಾಡಿದರು. ಶಾಸಕರ ಅಭಿಪ್ರಾಯಕ್ಕೆ ಸ್ಪೀಕರ್ ಸಮ್ಮತಿ ಸೂಚಿಸಿದರು.

Previous Post Next Post

Contact Form

f="https://unpkg.com/video.js/dist/video-js.css" rel="stylesheet">