GruhaLakshmi : ಗೃಹಲಕ್ಷ್ಮಿ ಯೋಜನೆಗೆ ಡೇಟ್ ಫಿಕ್ಸ್ : ಇಂದು ಮಾಹಿತಿ ನೀಡಲಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್


ಗೃಹಲಕ್ಷ್ಮಿ ಯೋಜನೆಗೆ ಡೇಟ್ ಫಿಕ್ಸ್ : ಇಂದು ಮಾಹಿತಿ ನೀಡಲಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

********************************

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಮಹತ್ವಕಾಂಕ್ಷಿಯ ಯೋಜನೆಯಾದ ಗೃಹಲಕ್ಷ್ಮಿ ಗೆ ಚಾಲನೆ ನೀಡುವ ಎಲ್ಲಾ ಸಾಧ್ಯತೆಗಳಿದ್ದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ. ಈ ಕುರಿತು ಶುಕ್ರವಾರದಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಯೋಜನೆಗೆ ಯಾವಾಗ ಚಾಲನೆ ಮತ್ತು ಅರ್ಜಿ ಸ್ವೀಕಾರ ಯಾವಾಗ ಆರಂಭವಾಗುತ್ತದೆ ಎಂಬುದರ ಬಗ್ಗೆ ತಿಳಿಸಲಿದ್ದಾರೆ.

2024ರ ಲೋಕಸಭೆ ಚುನಾವಣೆ ಗಾಗಿ ಪ್ರತಿಪಕ್ಷಗಳು ಒಂದಾಗಲಿದ್ದು ಈ ಹಿನ್ನೆಲೆ ಜುಲೈ 17 ಮತ್ತು 18ರಂದು ಪ್ರತಿಪಕ್ಷಗಳ ಸಭೆಯನ್ನು ಆಯೋಜಿಸಲಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ, ರಾಹುಲ್ ಗಾಂಧಿ ಈ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದು ಇದೇ ವೇಳೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರವು ಮುಂದಾಗಿದೆ ಎಂದು ತಿಳಿದು ಬಂದಿದೆ.

Previous Post Next Post

Contact Form

f="https://unpkg.com/video.js/dist/video-js.css" rel="stylesheet">