ಇಂದು ಕಾಂಗ್ರೆಸ್ ಸರಕಾರದ ಗೃಹಲಕ್ಷ್ಮಿ ಯೋಜನೆ ಗೆ ಲಕ್ಷ್ಮಿ ಹೆಬ್ಬಾಳಕರಿಂದ ಚಾಲನೆ ಡಾ. ನಾಗವೇಣಿ.
ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್ಸಿನ 5 ಯೋಜನೆಗಳಲ್ಲಿ, ಮಹತ್ವದ ಗೃಹಲಕ್ಷ್ಮಿ ಯೋಜನೆಗೆ ದಿನಾಂಕ 19 ರಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಚಾಲನೆ ನೀಡಲಿದ್ದಾರೆ ರೆಂದು ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಡಾ. ನಾಗವೇಣಿ ಎಸ್ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿನಾಂಕ 19 ರಂದು ಬೆಂಗಳೂರಿನ ವಿಧಾನಸೌಧದಲ್ಲಿ ಇರುವ ಬೃಹತ್ ಸಭಾಂಗಣದಲ್ಲಿ ಸಂಜೆ 4:00ಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.
ದಿನಾಂಕ 19 ರಂದು ಸಂಜೆ 4 ಗಂಟೆಗೆ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮಕ್ಕೆ ರಾಯಚೂರು ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಪ್ರಮುಖ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಡಾ. ನಾಗವೇಣಿ ಎಸ್ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
*ರಿಪೋರ್ಟರ್ ಮೆಹಬೂಬ ಮೊಮೀನ.*
