Koppal : ಮೋಹರಂ ಹಿನ್ನೆಲೆ: ಜುಲೈ 28ರಿಂದ ಜುಲೈ 29ರವರೆಗೆ ಮದ್ಯೆ ಮಾರಾಟ ನಿಷೇಧ

 

ಮೋಹರಂ ಹಿನ್ನೆಲೆ: ಜುಲೈ 28ರಿಂದ ಜುಲೈ 29ರವರೆಗೆ ಮದ್ಯೆ ಮಾರಾಟ ನಿಷೇಧ

---

ಕೊಪ್ಪಳ ಜುಲೈ 26 (ಕರ್ನಾಟಕ ವಾರ್ತೆ): ಮೋಹರಂ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಪಾಲನೆಗಾಗಿ ಜುಲೈ 28ರ ಬೆಳಗ್ಗೆ 6 ಗಂಟೆಯಿಂದ ಜುಲೈ 29ರ ರಾತ್ರಿ 11.30ರವರೆಗೆ ಮದ್ಯೆ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಆದೇಶ ಹೊರಡಿಸಿದ್ದಾರೆ.

ಮೋಹರಂ ಹಿನ್ನೆಲೆಯಲ್ಲಿ ಜುಲೈ 28ರಂದು ಕತಲ್‌ರಾತ್ ಹಾಗೂ ಜುಲೈ 29ರಂದು ಪಂಜಾಗಳು ಮೆರವಣಿಗೆಯಲ್ಲಿ ಸಾಗುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಶಕ್ತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965ರ ಪ್ರಕಾರ ಪ್ರದತ್ತವಾದ ಅಧಿಕಾರ ಚಲಾಯಿಸಿ ಜುಲೈ 28ರ ಬೆಳಗ್ಗೆ 6 ಗಂಟೆಯಿಂದ ಜುಲೈ 29ರ ರಾತ್ರಿ 11.30ರವರೆಗೆ ಎಲ್ಲಾ ವೈನಶಾಪ, ಬಾರ್‌ಗಳು ಸಗಟು ಮತ್ತು ಚಿಲ್ಲರೆ ಮದ್ಯೆ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಲು, ಈ ಆದೇಶವನ್ನು ಜಾರಿ ತರುವಲ್ಲಿ ನಿರ್ಲಕ್ಷ್ಯತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Previous Post Next Post

Contact Form

f="https://unpkg.com/video.js/dist/video-js.css" rel="stylesheet">