Koppal : ಹಿರೇಬಗನಾಳ ಗ್ರಾಪಂ ನೂತನ ಅಧ್ಯಕ್ಷರಾಗಿ ಅಂದಮ್ಮ ಹಿರೇಮಠ ಆಯ್ಕೆ

ಹಿರೇಬಗನಾಳ ಗ್ರಾಪಂ ನೂತನ ಅಧ್ಯಕ್ಷರಾಗಿ ಅಂದಮ್ಮ ಹಿರೇಮಠ ಆಯ್ಕೆ 

ಕೊಪ್ಪಳ,: ತಾಲ್ಲೂಕಿನ ಹಿರೇಬಗನಾಳ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಅಂದಮ್ಮ ಗುರುಪಾದಯ್ಯ ಹಿರೇಮಠ ಮತ್ತು ಉಪಾಧ್ಯಕ್ಷರಾಗಿ ಸೋಮವ್ವ ಮರಿಯಪ್ಪ ಮ್ಯಾಗಳಮನಿ ಅವರನ್ನು ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ತಾಲೂಕಿನ ಹಿರೇಬಗನಾಳ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಗುರುವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

24 ಸದಸ್ಯ ಬಲದ ಗ್ರಾಮ ಪಂಚಾಯತಿನಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಚುನಾವಣಾಧಿಕಾರಿ ಉಮೇಶ ಪೂಜಾರ ಅವರು ಇಬ್ಬರ ಹೆಸರನ್ನು ಘೋಷಿಸಿದರು.

ನೂತನ ಅಧ್ಯಕ್ಷರಿಗೆ ಹಾಗೂ ಉಪಾಧ್ಯಕ್ಷರಿಗೆ ಗ್ರಾಮ ಪಂಚಾಯತಿ ಸರ್ವ ಸದಸ್ಯರು, ಗ್ರಾಮಸ್ಥರು, ಬೆಂಬಲಿಗರು ಹೂಮಾಲೆ ಹಾಕಿ, ಅಭಿನಂದಿಸಿ, ಶುಭ ಕೋರಿದರು.

ವರದಿ : ಶಿವಕುಮಾರ್ ಹಿರೇಮಠ


 

Previous Post Next Post

Contact Form

f="https://unpkg.com/video.js/dist/video-js.css" rel="stylesheet">