Koppal : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ


ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

----

ಕೊಪ್ಪಳ ಜುಲೈ 27 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ ಇಲಾಖೆಯ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಗಳ) ವಿದ್ಯಾರ್ಥಿನಿಲಯಗಳ ಹೊಸ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗ ಪ್ರವೇಶ ಬಯಸುವ ಪ್ರವರ್ಗ-1, ಎಸ್ಸಿ & ಎಸ್ಟಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ. 2.50 ಲಕ್ಷ ರೂ. ಮತ್ತು ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ. 1 ಲಕ್ಷದೊಳಗಿರಬೇಕು.

ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನವಾಗಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್   www.bcwd.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್   [email protected] ಮುಖಾಂತರ ಅಥವಾ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8050770005ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post Next Post

Contact Form

f="https://unpkg.com/video.js/dist/video-js.css" rel="stylesheet">