ಗಂಗಾವತಿ (ಕೊಪ್ಪಳ ಜಿಲ್ಲೆ): ಕೊಪ್ಪಳ ಜಿಲ್ಲೆಯ ಗಂಗಾವತಿಯ ತಹಶೀಲ್ದಾರ್ ಮಂಜುನಾಥ ಬೋಗಾವತಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಅಕ್ರಮವಾಗಿ ಕೆಂಪು ಮಣ್ಣು ಸಾಗಾಣಿಕೆಗೆ ನೆರವಾಗಲು ಮಂಜುನಾಥ 1ಲಕ್ಷ ನೀಡುವಂತೆ ವ್ಯಕ್ತಿಯೊಬ್ಬರಿಗೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ಮಂಜುನಾಥ ಪರವಾಗಿ ರಾಜು ಎಂಬ ಖಾಸಗಿ ವ್ಯಕ್ತಿ 50 ಸಾವಿರ ಪಡೆದುಕೊಂಡಿದ್ದರು. ಇನ್ನುಳಿದ ಹಣ ಪಡೆದುಕೊಳ್ಳುವಾಗ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಬ್ಬರನ್ನೂ ಬಂಧಿಸಲಾಗಿದೆ.
ಗಂಗಾವತಿ ತಹಶೀಲ್ದಾರ್ ಮಂಜುನಾಥ ಅವರನ್ನು ಬಂಧಿಸಲು ಶನಿವಾರ ಸಂಜೆಯಿಂದಲೇ ಕಾಯುತ್ತಿದ್ದೆವು.
ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರಿಂದ ಆಗಿರಲಿಲ್ಲ. ರಾತ್ರಿ 11 ಗಂಟೆ ಸುಮಾರಿಗೆ ಬಂಧಿಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ಖಚಿತಪಡಿಸಿವೆ.
ಕೊಪ್ಪಳ ಲೋಕಾಯುಕ್ತ ಡಿವೈಎಸ್ ಪಿ ಸಲೀಂ ಪಾಷಾ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
