ಕೆ.ಎಂ.ಶ್ರೀರಕ್ಷಾ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ
ಕಂಪ್ಲಿ :
ಪಟ್ಟಣದ ಶಾರದಾ ವಿದ್ಯಾನಿಕೇತನ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಕೆ.ಎಂ.ಶ್ರೀರಕ್ಷಾ ಮಂಗಳವಾರ ಬಳ್ಳಾರಿಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಕ್ತಿ ಗೀತೆ ಹಾಗೂ ಭಾವಗೀತೆ ಗಾಯನ ಎರಡರಲ್ಲಿಯೂ ಪ್ರಥಮ ಸ್ಥಾನವನ್ನು ಗಳಿಸಿದ್ದಾಳೆ. ಬಾಲಕಿಯ ಈ ಕಾರ್ಯಕ್ಕೆ ಅಕ್ಕಿಗಿರಣಿ ಮಾಲಿಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಕೆ.ಎಂ.ಹೇಮಯ್ಯಸ್ವಾಮಿ, ಪಟ್ಟಣದ ಮುಖಂಡರು ಸೇರಿದಂತೆ ಶಾಲಾ ಆಡಳಿತ ಮಂಡಳಿಯವರು ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.
