ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು. ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದರು. ಈ ಸಂದರ್ಭದಲ್ಲಿ ರಾಜ್ಯದ ಕೃಷಿ ಸಚಿವ ಕೃಷ್ಣಾ ಬೈರೆಗೌಡರಿದ್ದರು.
Reported By : Basu kabbadi

