Protest : ಕೋರ್ಟ್ ಕಲಾಪ ಬಹಿಷ್ಕಾರ ಮಾಡಿದ ವಕೀಲರು: ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯ

 

ದೊಡ್ಡಬಳ್ಳಾಪುರ: ಕೋರ್ಟ್ ಕಲಾಪ ಬಹಿಷ್ಕಾರ ಮಾಡಿದ ವಕೀಲರು: ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯ

ದೊಡ್ಡಬಳ್ಳಾಪುರ: ಕೋರ್ಟ್ ಕಲಾಪ ಬಹಿಷ್ಕಾರ ಮಾಡಿದ ವಕೀಲರು: ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ವಕೀಲರ ಒತ್ತಾಯ

ದೊಡ್ಡಬಳ್ಳಾಪುರ:ಚಿಕ್ಕಮಗಳೂರಿನಲ್ಲಿ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೇ ಬಂದ ಯುವ ವಕೀಲರಾದ ಪ್ರೀತಂ ಅವರ ಮೇಲೆ ಪೊಲೀಸರು ಮನಸೋ ಇಚ್ಛೆ ಥಳಿಸಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದವರನ್ನು ಕೂಡಲೇ ಬಂಧನ ಮಾಡಬೇಕು ಎಂದು ಒತ್ತಾಯಿಸಿ ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದಿಂದ ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. 

  ಈ ವೇಳೆ ಮಾತನಾಡಿದ ಹಿರಿಯ ವಕೀಲರಾದ ಎ.ಕೃಷ್ಣಮೂರ್ತಿ ಅವರು ಚಿಕ್ಕಮಗಳೂರಿನ ಯುವ ವಕೀಲ ಪ್ರೀತಂ ಅವರು ಹೆಲ್ಮೆಟ್ ದರಿಸದೆ ವಾಹನ ಚಾಲನೆ ಮಾಡಿದ್ದಾರೆ ಎಂದು ಪ್ರೀತಂ ಅವರನ್ನು ಠಾಣೆಗೆ ಎಳೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಪಿಎಸ್‌ಐ ಮಹೇಶ್ ಪೂಜಾರಿ ಸೇರಿ ಆರು ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಿ ಕೂಡಲೇ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

  ವಕೀಲ ಮಾವಿನಕುಂಟೆ ರವಿ ಅವರು ಮಾತನಾಡಿ ವಕೀಲ ಪ್ರೀತಂ ಅವರು ಗುರುವಾರ ರಾತ್ರಿ ಹೆಲ್ಕೆಟ್ ಇಲ್ಲದೆ ಮಾರ್ಕೆಟ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಠಾಣೆಯ ಎದುರು ಅಡ್ಡಗಟ್ಟಿದ ಪೊಲೀಸರು, ಅವರ ಬೈಕ್‌ನಿಂದ ಕೀ ಕಸಿದುಕೊಂಡಿದ್ದಾರೆ, 'ಹೆಲೈಟ್ ಹಾಕದಿರುವುದಕ್ಕೆ ದಂಡ ಕಟ್ಟುತ್ತೇನೆ, ಕೀ ಕಸಿದುಕೊಳ್ಳಲು ನಿಮಗೆ ಅಧಿಕಾರ ಕೊಟ್ಟಿದ್ದು ಯಾರು' ಎಂದು ಪ್ರೀತಂ ಪ್ರಶ್ನಿಸಿದ್ದಾರೆ. ಅಲ್ಲದೇ ಅದನ್ನು ವಿಡಿಯೊ ಮಾಡಿಕೊಂಡಿದ್ದಾರೆ. ಬಳಿಕ ಪೊಲೀಸರು ಪ್ರೀತಂ ಅವರನ್ನು ಠಾಣೆಯ ಒಳಗೆ ಕರೆದೊಯ್ದಿದ್ದಾರೆ. 'ಕಂಪ್ಯೂಟರ್ ಕೊಠಡಿಯಲ್ಲಿ ಕೂಡಿ ಹಾಕಿ ಮನ ಬಂದಂತೆ ದೊಣ್ಣೆ, ಲಾಠಿ, ಪೈಪ್‌ನಿಂದ ಹಲ್ಲೆ ನಡೆಸಿ. ಕಾಲಿನಿಂದಲೂ ತುಳಿದಿದ್ದಾರೆ ಎಂದು ಆರೋಪಿಸಿದರು. 

  ಪೊಲೀಸರಿಗೆ ವಾಹನದ ಕೀ ಕಸಿದುಕೊಳ್ಳುವ ಮತ್ತು ವ್ಯಕ್ತಿಯ ಮೇಲೆ ಹಲ್ಲೆ ಮಾಡುವ ಅಧಿಕಾರ ಕೊಟ್ಟವರು ಯಾರು ? ಎಂದು ಪ್ರಶ್ನೆ ಮಾಡಿದ ಅವರು ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಈ ಕೂಡಲೇ ಕರ್ತವ್ಯಲೋಪ ಮಾಡಿದ ಪೊಲೀಸರನ್ನು ಬಂಧಿಸಬೇಕು ಎಂದರು. 

  ಇದೇ ವೇಳೆ ಬೆಳಗಾವಿ ಅಧಿವೇಶನದಲ್ಲಿ ಪೊಲೀಸರಿಗೆ ರಕ್ಷಣೆ ನೀಡುವ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. 

  ಹಿರಿಯ ವಕೀಲ ರುದ್ರರಾಧ್ಯ ಮಾತನಾಡಿ ಪೊಲೀಸರಿಂದ ಹಲ್ಲೆಗೆ ಒಳಗಾದ ವಕೀಲ ಪ್ರೀತಂ ಅವರ ಎದೆ ಮತ್ತು ಬೆನ್ನಿಗೆ ಸಾಕಷ್ಟು ಗಾಯಗಳಾಗಿದೆ, ಇದು ಪೊಲೀಸರು ಕಾನೂನು ರಕ್ಷಣೆಯ ಹೆಸರಲ್ಲಿ ನಡೆಸಿದ ಕ್ರೌರ್ಯ ಎಂದರು. ಈ ನಡುವೆ ವಕೀಲರ ಮೇಲೆ ಹಲ್ಲೆ ನಡೆಸಿದ ಪೊಲೀಸ್ 'ಠಾಣೆಯ ಸಬ್ ಇನ್‌ಸ್ಪೆಕ್ಟರ್, ಸಹಾಯಕ ಸಬ್ ಇನ್‌ಸ್ಪೆಕ್ಟರ್ ಸೇರಿ ಆರು ಪೊಲೀಸರ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ, ಅಷ್ಟೂ ಜನರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಇಡೀ ಪ್ರಕರಣದ ಸಂಬಂಧ ತನಿಖೆ ನಡೆಸಿ ವರದಿ ನೀಡಲು ಡಿವೈಎಸ್‌ಪಿಗೆ ಸೂಚನೆ ನೀಡಲಾಗಿದೆ' ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ  ತಿಳಿಸಿದ್ದಾರೆ ಆದರೆ ತಪ್ಪಿತಸ್ತರನ್ನು ಅಮಾನತು ಮಾಡಿದರೆ ಸಾಲದು ಈ ಕೂಡಲೇ ಅವರನ್ನು ಬಂಧಿಸಿ ಸೂಕ್ತ ತನಿಖೆ ನಡೆಸಿ ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದರು. 

  ಪ್ರತಿಭಟನೆಯಲ್ಲಿ ವಕೀಲರಾದ ಎಲ್.ಸಂಜೀವಪ್ಪ, ಡಿಕೆ.ಲಕ್ಷ್ಮೀನಾರಾಯಣ್, ಆರ್.ಪ್ರಭಾಕರ್, ಅಶೋಕ್, ಚಂದ್ರಶೇಖರ್,  ಸಂಘದ ಮಾಜಿ ಅಧ್ಯಕ್ಷ ಮಂಜುನಾಥ, ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳು ಸೇರಿದಂತೆ ನೂರಾರು ವಕೀಲರು ಉಪಸ್ಥಿತರಿದ್ದರು.

Previous Post Next Post

Contact Form

f="https://unpkg.com/video.js/dist/video-js.css" rel="stylesheet">