ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಬರ ವೀಕ್ಷಣೆ.
ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ತಾಲ್ಲೂಕಿನ ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ ಗ್ರಾಮಗಳಲ್ಲಿ ಬರ ಪರಿಸ್ಥಿತಿಯ ಅಧ್ಯಯನ ನಡೆಸಿದರು. ಮಾಜಿ ಸಚಿವ ಡಾ.ಕೆ ಸುಧಾಕರ್ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ಆರ್ ಅಶೋಕ ಹಲವು ಜಿಲ್ಲೆಗಳಲ್ಲಿ ಬರಗಾಲ ವೀಕ್ಷಣೆ ಮಾಡಿದ್ದೇನೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮಳೆಯೂ ಬಂದಿಲ್ಲ. ರೈತರಿಗೆ ಭರಪೂರ ಆಶ್ವಾಸನೆ ನೀಡಿ ನಡು ನೀರಿನಲ್ಲಿ ಕೈ ಬಿಟ್ಟಿದ್ದಾರೆ.
ರೈತರಿಗೆ ಕನಿಷ್ಟ ವಿದ್ಯುಯ್ ಪೂರೈಕೆ ಮಾಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿವೇಶನ ನಡೆಯುತ್ತಿದೆ ಎಂಬ ಕಾರಣಕ್ಕೆ ಎರಡು ಸಾವಿರ ಬೆಳೆ ಪರಿಹಾರ ಧನ ಘೋಷಣೆ ಮಾಡಿದ್ದಾರೆ.
ರೈತರ ಸಾಲ ಮನ್ನಾ ಮಾಡಿ:
ರೈತರು ಬರಗಾಲದಿಂದ ಕಂಗಾಲಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಹೀಗಾಗಿ ರೈತರ ಸಾಲವನ್ನು ೨ ಲಕ್ಷದ ವರೆಗೂ ಮನ್ನಾ ಮಾಡಬೇಕು. ಹಗಲಿನ ವೇಳೆ ವಿದ್ಯುತ್ ನೀಡಬೇಕು, ಕೇಂದ್ರ ಸರ್ಕಾರ ನೀಡುತ್ತಿರುವ ಅಕ್ಕಿಯನ್ನು ಸಂಪೂರ್ಣವಾಗಿ ನೀಡಬೇಕು ಎಂದು ವಿಧಾನಸಭೆಯಲ್ಲಿ ಪ್ರಶ್ನೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಅಧಿಕಾರಕ್ಕಾಗಿ ಕಿತ್ತಾಟ:
ಸಿಎಂ ಸಿದ್ದರಾಮಯ್ಯ ಮೊದಲಿನ ಸಿದ್ದರಾಮಯ್ಯ ಆಗಿಲ್ಲ. ನಾವು ಅಧಿಕಾರದಲ್ಲಿದ್ದಾಗ ಬರ ಇದ್ದಾಗ ಒಂದೇ ತಿಂಗಳಲ್ಲಿ ಬರದ ಹಣವನ್ನು ನೀಡಿದ್ದೇವು, ಮಳೆ ಆಧಾರಿತ ಬೆಳೆಗೆ ಎಕರೆಗೆ ೧೩,೬೦೦ ರೂ. ತೋಟಗಾರಿಕೆ ಬೆಳೆಗೆ ೨೫ ಸಾವಿರ ಕೊಟ್ಟಿದ್ದೆವು. ಇವರ ಬಳಿ ಹಣ ಇಲ್ಲ ಹೀಗಾಗಿ ಕೊಡುತ್ತಿಲ್ಲ.
ಮಂತ್ರಿಗಳು ಅಧಿಕಾರದ ಆಸೆಗಾಗಿ ಕಿತ್ತಾಡುತ್ತಿದ್ದಾರೆ ಎಂದರು.
ಸರ್ಕಾರದ ಕಿವಿ ಹಿಂಡಲಾಗುವುದು.
ವಿರೋಧ ಪಕ್ಷದ ನಾಯಕನಾದ ಬಳಿಕ ಬೀದರ್, ಕಲಬುರಗಿ, ಚಿಕ್ಕಬಳ್ಳಾಪುರ, ಬೆಂ ಗ್ರಾ, ಜಿಲ್ಲೆ ಸೇರಿ ಹಲವು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಬರ ಅಧ್ಯಯನ ಮಾಡಿದ್ದೇನೆ. ಸರ್ಕಾರದ ಎಲ್ಲಾ ವೈಫಲ್ಯಗಳನ್ನು ಎತ್ತಿ ಹಿಡಿದು, ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಲಾಗುವುದು ಎಂದರು.
ದೊಡ್ಡಬಳ್ಳಾಪುರದ ಸೊಣ್ಣಪ್ಪನಹಳ್ಳಿಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಬರ ವೀಕ್ಷಣೆ ಮಾಡಿದರು. ಈ ವೇಳೆ ಮಾಜಿ ಸಚಿವ ಡಾ.ಕೆ ಸುಧಾಕರ್, ಶಾಸಕ ಧೀರಜ್ ಮುನಿರಾಜು, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿವಿ ಲಕ್ಷ್ಮೀನಾರಾಯಣ, ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ನಾಗೇಶ್, ಬಂತಿ ವೆಂಕಟೇಶ್ ಮತ್ತಿತ್ತರರು ಇದ್ದರು
ಕೋಡಿಹಳ್ಳಿ ಗ್ರಾಮದಲ್ಲಿ ಅಜ್ಜಿಯ ಸಮಸ್ಯೆ ಆಲಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ


