ಹೊಸಪೇಟೆ :ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತ-Siddi TV

ವಿಜಯನಗರ: ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಜನ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದರು. ಈ ಪೈಕಿ ವೃದ್ಧೆಯೊಬ್ಬರು ಮೃತಪಟ್ಟಿರುವುದು ಕಂಡುಬಂದಿದೆ     ಕಾರಿಗನೂರಿನ RBSSN ಕ್ಯಾಂಪ್ ನಿವಾಸಿ ಸೀತಮ್ಮ (66) ಮೃತ ವೃದ್ಧೆ. ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದರಿಂದ ಗ್ರಾಮದ 30ಕ್ಕೂ ಹೆಚ್ಚು ಮಂದಿಯನ್ನು ಶನಿವಾರ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಸೀತಮ್ಮ ಅವರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ನಂತರ ಅವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಭಾನುವಾರ ಸಂಜೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಟ್ಯಾಂಕರ್‌ ಕ್ಲೀನ್‌ ಮಾಡದೆ ಪೂರೈಕೆ ಮಾಡಿದ್ದರಿಂದ ಗ್ರಾಮಕ್ಕೆ ಪಾಚಿ ಮಿಶ್ರಿತ ಕುಡಿಯುವ ನೀರು ಸರಬರಾಜು ಆಗಿತ್ತು. ಅನಿವಾರ್ಯತೆಯಿಂದ ಆ ನೀರನ್ನೇ ಕುಡಿದ ಹಿನ್ನೆಲೆಯಲ್ಲಿ 30ಕ್ಕೂ ಅಧಿಕ ಜನಕ್ಕೆ ವಾಂತಿ, ಭೇದಿಯಾಗಿ ಅಸ್ವಸ್ಥರಾಗಿದ್ದರು. ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಧ್ಯಾಹ್ನ ಶಾಸಕ ಗವಿಯಪ್ಪ, ಡಿಸಿ ದಿವಾಕರ್ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ್ದರು

Previous Post Next Post

AD

 


Siddi TV

Contact Form

f="https://unpkg.com/video.js/dist/video-js.css" rel="stylesheet">