ನಟ, ಮಾಜಿ ಐಎಎಸ್ ಅಧಿಕಾರಿ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ-K Shivaram

 

ನಟ, ಮಾಜಿ ಐಎಎಸ್ ಅಧಿಕಾರಿ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

ಕನ್ನಡದಲ್ಲಿ ಐಎಎಸ್ (IAS) ಮಾಡಿದ ಮೊದಲ ಅಧಿಕಾರಿ ಹಾಗೂ ಬಾ ನಲ್ಲೆ ಮಧುಚಂದ್ರಕೆ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ (Actor) ನಟಿಸಿರುವ ಕೆ.ಶಿವರಾಮ್ (K. Shivaram) ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಇದೆ. ಅನಾರೋಗ್ಯದಿಂದಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಹಲವು ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು.


ಮೂಲಗಳ ಪ್ರಕಾರ ಎಚ್.ಸಿ.ಜಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪರಿಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ಸಿಗುತ್ತಿದೆ. ಕನ್ನಡದಲ್ಲೇ ಐಎಎಸ್ ಬರೆದು, ನಂತರ ಬೆಂಗಳೂರು, ವಿಜಯಪುರ, ಕೊಪ್ಪಳ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಅವರು ಕೆಲಸ ಮಾಡಿದ್ದಾರೆ.

ನಂತರ ಬಾ ನಲ್ಲೆ ಮಧುಚಂದ್ರಿಕೆ, ವಸಂತ ಕಾವ್ಯದಂತಹ ಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದಾರೆ. ಸಾಂಗ್ಲಿಯಾನ 3 ಚಿತ್ರದಲ್ಲಿ ಇವರದ್ದು ಖಳನಾಯಕನ ಪಾತ್ರ. ಹತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಶಿವರಾಮ್, ತಮ್ಮ ಮಗಳನ್ನು ನಟ ಪ್ರದೀಪ್ ಅವರಿಗೆ ಧಾರೆಯರೆದಿದ್ದರು. ಕೆಲವು ತಿಂಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಅವರು ಆಪ್ತರು ತಿಳಿಸಿದ್ದಾರೆ.

Previous Post Next Post

Contact Form

f="https://unpkg.com/video.js/dist/video-js.css" rel="stylesheet">