ಮಾನ್ವಿ : ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕನೊರ್ವ ಆತ್ಮಹತ್ಯೆ-Siddi TV


ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣ ಘಟನೆ ನಡೆದಿದೆ. ಆದರ್ಶ್‌ (24) ಆತ್ಮಹತ್ಯೆ ಮಾಡಿಕೊಂಡವನು.

ಮಾನ್ವಿ ಪಟ್ಟಣದಲ್ಲಿ ಆದರ್ಶ್‌ ಹೇರ್ ಕಟಿಂಗ್ ಶಾಪ್ ಹೊಂದಿದ್ದ. ಈ ನಡುವೆ ಮದ್ಯ ಸೇವಿಸುವುದನ್ನು ಹವ್ಯಾಸ ಮಾಡಿಕೊಂಡಿದ್ದ. ದುಡಿದ ಹಣವನ್ನೆಲ್ಲ ಕುಡಿತಕ್ಕೆ ಹಾಕುತ್ತಿದ್ದ. ನಿತ್ಯ ಕುಡಿದು ಮನೆಗೆ ಬರುತ್ತಿದ್ದ. ಇದೇ ವಿಚಾರಕ್ಕೆ ಮನೆಯಲ್ಲಿ ಪೋಷಕರು ಬೈದು ಬುದ್ಧಿವಾದ ಹೇಳಿದ್ದರು.


ಬುದ್ಧಿವಾದವನ್ನೇ ಅವಮಾನ ಎಂದು ತಿಳಿದು ಮನನೊಂದಿದ್ದ. ಕೋಪದ ಕೈಗೆ ಬುದ್ಧಿಕೊಟ್ಟ ಆದರ್ಶ್‌ ಮನೆ ಬಾತ್ ರೂಂನಲ್ಲಿರುವ ಪೈಪ್‌ಗೆ ಹಗ್ಗ ಕಟ್ಟಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನ ಸಾವಿನಿಂದ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಸಿದ್ದಿ ಟಿವಿ ಶಫೀಕ್ ಹುಸೇನ್ ಮಾನವಿ



Previous Post Next Post

Contact Form

f="https://unpkg.com/video.js/dist/video-js.css" rel="stylesheet">