ನಾಳೆ ಕಂಪ್ಲಿ ಪಟ್ಟಣದಲ್ಲಿ ವಿದ್ಯುತ್ ವ್ಯತ್ಯಯ
ಕಂಪ್ಲಿ: ಇಲ್ಲಿಯ 110 ಕೆವಿ ವ್ಯಾಪ್ತಿಯ ಹೊಸ ಮಾರ್ಗಗಳ ಕಾಮಗಾರಿ ಇರುವುದರಿಂದ ಮಾ.23 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕಂಪ್ಲಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಜೆಸ್ಕಾಂ ಇಲಾಖೆಯ ಹೊಸಪೇಟೆ, ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜೆ. ದಯಾನಂದ್ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.