ಜನಾರ್ಧನ್ ರೆಡ್ಡಿ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್, ಮುಹೂರ್ತ ಫಿಕ್ಸ್..!
ಲೋಕಸಭಾ ಚುನಾವಣೆ ಬೆನ್ನಲ್ಲೇ ಬಿಜೆಪಿ(BJP) ತೊರೆದ ನಾಯಕರು ಘರ್ ವಾಪ್ಸಿ ಆಗುತ್ತಿದ್ದಾರೆ. ಇದೀಗ ಗಣಿ ದಣಿ, ಬಳ್ಳಾರಿಯ ಜನಾರ್ದನ್ ರೆಡ್ಡಿ ಯವರು ಬಿಜೆಪಿ ಸೇರಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಮುಹೂರ್ತ ಕೂಡ ಫಿಕ್ಸ್ ಆಗಿದೆ.
ಹೌದು, ರಾಜ್ಯ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಕೆಆರ್ಪಿಪಿ(KRPP) ಸಂಸ್ಥಾಪಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚನಲ ಮೂಡಿಸಿದೆ. ಪಕ್ಷ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಯಾವುದೇ ಷರತ್ತುಗಳು ಇಲ್ಲದೇ ಸೋಮವಾರ ಬಿಜೆಪಿ ಸೇರ್ಪಡೆಯಾಗಲು ಸಜ್ಜಾಗಿದ್ದಾರೆಂದು ತಿಳಿದುಬಂದಿದೆ.